ಬೆಂಗಳೂರು ಗ್ರಾಮಾಂತರ

ಜೀವನದಲ್ಲಿ ಜಿಗುಪ್ಸೆ: ಗೃಹಿಣಿ ಆತ್ಮಹತ್ಯೆ

Published On :

ಚನ್ನಪಟ್ಟಣ: ಜೀವನದಲ್ಲಿ ಜಿಗುಪ್ಸೆಗೊಂಡ ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ಮೋಳೆದೊಡ್ಡಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಕೋಮಲ (25) ಮೃತ ದುರ್ದೈವಿ. ಮನೆಯ ಬಾಗಿಲನ್ನು ಹಾಕಿ ಕೊಂಡನ ಈಕೆ ಬುಧವಾರ ರಾತ್ರಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  ಇದು ವರದಕ್ಷಿಣೆಯಿಂದ ಸಂಭವಿಸಿರುವ ಸಾವು ಎಂದು ಮೃತಳ ಪೋಷಕರು ಪತಿ ಸುರೇಶ್ ವಿರುದ್ಧ ದೂರು ದಾಖಲಿಸಿದ್ದಾರೆ.  ಅಕ್ರಮ ಸಂಬಂಧದ ಸಂಗತಿ ನನಗೆ ತಿಳಿದಿದ್ದರಿಂದ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪತಿ ಸುರೇಶ್ ಪೊಲೀಸರಿಗೆ ತಿಳಿಸಿದ್ದು ಈ ಸಂಬಂಧ ದೂರು ದಾಖಲಿಸಿ ಕೊಂಡಿರುವ ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಕಾರಿಣಿಗೆ ಕೆ.ಎಂ. ಹನುಮಂತರಾಯಪ್ಪ
ದೊಡ್ಡಬಳ್ಳಾಪುರ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾಗಿ ಇಲ್ಲಿನ ಹಿರಿಯ ಬಿಜೆಪಿ ಮುಖಂಡ, ಕರ್ನಾಟಕ ರಾಜ್ಯ ರೇಷ್ಮೆ ಮಾರಾಟ ಮಂಡಲಿ ಮಾಜಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ ಆಯ್ಕೆಯಾಗಿದ್ದಾರೆ. ಹನುಮಂತರಾಯಪ್ಪ ಜನಸಂಘ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿನ್ನಲೆಯಿಂದ ಬಂದು ಕಳೆದ 4 ದಶಕಗಳಿಂದ ಪಕ್ಷದ ನಿಷ್ಠ ಕಾರ್ಯಕರ್ತರಾಗಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರಾಗಿ, ಸದಸ್ಯರಾಗಿ, ಬಿಜೆಪಿಯ ಜಿಲ್ಲಾಧ್ಯಕ್ಷರಾಗಿ, ವಿವಿಧ ಘಟಕಗಳಲ್ಲಿ ಸೇವೆಸಲ್ಲಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.