ರು. 11 ಕೋಟಿ ವೆಚ್ಚದಲ್ಲಿ ನಿರ್ಮಾಣ ರಾಂಪುರ ಏತ ನೀರಾವರಿ ಯೋಜನೆ
ಕ.ಪ್ರ.ವಾರ್ತೆ ಕನಕಪುರ ಡಿ.26
ಬೆಂಗ್ರಾ ಸಂಸದ ಡಿ.ಕೆ.ಸುರೇಶ್ ಅವರು ಕನಕಪುರ ತಾಲೂಕಿನ ಸಾತನೂರು ಹಾಗೂ ತುಂಗಣಿ ಗ್ರಾಪಂ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿದರು.
ಕಾಂಗ್ರೆಸ್ ಮುಖಂಡರಾದ ಇಕ್ಬಾಲ್ ಹುಸೇನ್, ವಿಜಯದೇವ್, ರಾಂಪುರ ನಾಗೇಶ್, ರಾಯಸಂದ್ರ ರವಿ, ಕೆ.ಎನ್. ದಿಲೀಪ್, ಗ್ರಾಪಂ ಅಧ್ಯಕ್ಷ ಮರಿಗೌಡ, ತುಂಗಣಿ ದುರ್ಗಯ್ಯ, ರಂಗಸ್ವಾಮಿ, ಶಂಕರ್, ಮೊದಲಾದವರು ಪಾಲ್ಗೊಂಡಿದ್ದರು.
ಸಂಸದ ಡಿ.ಕೆ. ಸುರೇಶ್ ಮಾತನಾಡುತ್ತಾ ಕನಕಪುರ ತಾಲೂಕಿನ ಮಹಾತ್ವಾಕಾಂಕ್ಷಿ ಯೋಜನೆಯಾದ ರಾಂಪುರ ಏತ ನೀರಾವರಿ ಯೋಜನೆ 11 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಸರ್ಕಾರದಿಂದ ಈಗಾಗಲೇ ಐದು ಕೋಟಿ ಬಿಡುಗಡೆಯಾಗಿದ್ದು ಮಾರ್ಚ್ ಅಂತ್ಯದೊಳಗಾಗಿ ಪೂರ್ಣಗೊಳ್ಳಲಿದೆ. ರಾಂಪುರ ಏತ ನೀರಾವರಿಯಿಂದ ಬರಡಾಗಿರುವ ಮಾವತ್ತೂರು ಕೆರೆಗೆ ನೀರುಹರಿಸಿ ತುಂಬಿಸಲಾಗುವುದು. ಈ ಪ್ರಾಂತ್ಯದ ಅಂತರ್ಜಲ ಅಭಿವೃದ್ಧಿಗೆ ಯೋಜನೆಯಿಂದ ಲಾಭವಾಗಲಿದೆ ಎಂದರು.
ಸಾತನೂರು ಸಮೀಪ ನಿರ್ಮಾಣ ಪೂರ್ಣಗೊಳ್ಳುತ್ತಿರುವ ಹೋಬಳಿಯ 50 ಗ್ರಾಮಗಳಿಗೆ ಕಾವೇರಿ ನೀರು ಪೂರೈಸುವ ಶುದ್ಧೀಕರಣ ಘಟಕದ ಕಾಮಗಾರಿ ವೀಕ್ಷಿಸಿದ ಸಂಸದ ಸುರೇಶ್ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಗ್ರಾಮಾಂತರ ಪ್ರದೇಶದ ಹಳ್ಳಿಗಳಿಗೂ ಕುಡಿಯಲು ಕಾವೇರಿ ನೀರು ಸರಬರಾಜು ಮಾಡುವ ಮಹತ್ವದ ಯೋಜನೆ ಕೇಂದ್ರ ಸರ್ಕಾರದ ಯೋಜನೆಯಿಂದ ಫಲಪ್ರದವಾಗಿ ಅನುಷ್ಠಾನಗೊಳ್ಳುತ್ತಿದೆ. ದ್ವಿತಿಯ ಹಂತದಲ್ಲಿ ಇನ್ನೂ ಒಂದುನೂರು ಗ್ರಾಮಗಳಿಗೆ ಕಾವೇರಿ ನೀರು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

