ಕುರಿ ಕದ್ದೊಯ್ದ ಕಳ್ಳರು
ರಾಮನಗರ: ಒಂದೇ ರಾತ್ರಿಯಲ್ಲಿ ತಾಲೂಕಿನ ಮೂರು ಗ್ರಾಮಗಳಲ್ಲಿ ಕಳ್ಳತನ ಮಾಡಲು ಯತ್ನಿಸಿರುವ ಕಳ್ಳರು 2 ಕಡೆ ವಿಫಲರಾಗಿ ಕಡೆಗೆ 20 ಕುರಿಗಳನ್ನು ಕದ್ದೊಯ್ಯುವಲ್ಲಿ ಯಶಸ್ವಿಯಾಗಿದ್ದಾರೆ.
ತಾಲೂಕಿನ ತಿರುಮಲೇಗೌಡನ ದೊಡ್ಡಿಯ ಲಕ್ಷ್ಮಣಯ್ಯ ಎಂಬುವರ ಹೆಂಚಿನ ಮನೆಯ ಬಾಗಿಲನ್ನು ಒಡೆದು ಒಳ ನುಗ್ಗಿರುವ ಕಳ್ಳರು ಮನೆಯಲ್ಲಿ ಕೂಡಿದ್ದ 20 ಕುರಿಗಳನ್ನು ಕಳ್ಳತನ ಮಾಡಿದ್ದಾರೆ. ಈ ವೇಳೆ ಅರಚಿಕೊಂಡ ಮೇಕೆಗಳನ್ನು ಕತ್ತು ಕೊಯ್ದು ಸಾಯಿಸಿ, ಉಳಿದ ಕುರಿಗಳನ್ನು ಯಾವುದೋ ವಾಹನದಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ.
ತಾಲೂಕಿನ ಪಾದರಹಳ್ಳಿ ಮತ್ತು ಹಳ್ಳಿಮಾಳ ಗ್ರಾಮಗಳ ಸರ್ಕಾರಿ ಶಾಲೆಗಳಲ್ಲಿನ ಮಧ್ಯಾಹ್ನದ ಬಿಸಿಯೂಟಕ್ಕೆ ಸಂಗ್ರಹಿಸಿದ್ದ ಕೊಠಡಿಗಳ ಬಾಗಿಲನ್ನು ಒಡೆದು ಒಳ ನುಗ್ಗಿರುವ ಕಳ್ಳರು ಅಕ್ಕಿ ಸೇರಿದಂತೆ ಇನ್ನಿತರೆ ವಸ್ತುಗಳನ್ನು ಹೊರಗೆ ತಂದಿಟ್ಟಿದ್ದಾರೆ. ಅಷ್ಟರಲ್ಲಿ ಯಾರೋ ಬಂದಿರುವುದನ್ನು ಗಮನಿಸಿ ತಾವು ತಂದಿದ್ದ ಟಾರ್ಚ್ ಅನ್ನು ಅಲ್ಲಿಯೇ ಬಿಟ್ಟು ಅಲ್ಲಿಂದ ಕಾಲ್ಕಿತ್ತಿದ್ದಾರೆ. ಈ ಮೂರೂ ಘಟನೆಗಳ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

