ಬೆಂಗಳೂರು ಗ್ರಾಮಾಂತರ

ಜಿಲ್ಲಾ ಕೇಂದ್ರ ಘೋಷಣೆ: ಪ್ರಕ್ರಿಯೆ ಪ್ರಗತಿಯಲ್ಲಿ- ಕೃಷ್ಣ ಬೈರೇಗೌಡ

Published On :

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಜಿಲ್ಲಾ ಪ್ರದೇಶ ವ್ಯಾಪ್ತಿಯಲ್ಲೇ ಕೇಂದ್ರವನ್ನು ಘೋಷಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಆ ಕುರಿತು ಸರ್ಕಾರದ ಹಂತದಲ್ಲಿ ವಿವಿಧ ಇಲಾಖೆಗಳಿಂದ ಅಂಕಿ-ಅಂಶಗಳ ಕ್ರೋಢೀಕರಣ ಮತ್ತು ಪರಿಶೀಲನೆ ನಡೆಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಶುಕ್ರವಾರ ಇಲ್ಲಿನ ಸರ್ಕಾರಿ ಪ.ಪೂ.ಕಾಲೇಜು ಆವರಣದಲ್ಲಿ ಕನ್ನಡಪ್ರಭದೊಂದಿಗೆ ಮಾತನಾಡಿದ ಅವರು, ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲೂಕುಗಳಲ್ಲಿ ಜಿಲ್ಲಾ ಕೇಂದ್ರದ ಹೋರಾಟ ನಡೆಯುತ್ತಿದೆ.
ಇದಕ್ಕೆ ಪೂರಕವಾಗಿ ಸರ್ಕಾರ ಎಲ್ಲ ರೀತಿಯಲ್ಲೂ ಚರ್ಚಿಸಿ, ಅಂಕಿ-ಅಂಶಗಳ ಆಧಾರದಲ್ಲಿ ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಕಚೇರಿ ವರ್ಗಾವಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಜಿಲ್ಲಾಧಿಕಾರಿಗಳು ಈ ಬಗ್ಗೆ ಕಂದಾಯ ಇಲಾಖೆಗೆ ವರದಿ ನೀಡಿದ್ದಾರೆ. ಈ ಕುರಿತೂ ಸದ್ಯದಲ್ಲೇ ತೀರ್ಮಾನವಾಗಲಿದೆ ಎಂದರು.
ಅಪರೂಪ ಏನಲ್ಲ: ಅಪರೂಪಕ್ಕೆ ದೊಡ್ಡಬಳ್ಳಾಪುರಕ್ಕೆ ಬಂದಿದ್ದೀರಿ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು ಅಪರೂಪ ಏನಿಲ್ಲ. ಅಧಿಕೃತ ಕಾರ್ಯಕ್ರಮ ಹಾಕಿಕೊಂಡಿರಲಿಲ್ಲ ಅಷ್ಟೇ. ಈಗ ಸದ್ಯದಲ್ಲೇ ಎಲ್ಲ ಇಲಾಖೆಗಳ ಪ್ರಗತಿ ಸಭೆ ಸೇರಿದಂತೆ ಸರ್ಕಾರದ ಅಧಿಕೃತ ಕಾರ್ಯಯೋಜನೆಗಳಿಗೆ ಚಾಲನೆ ಸಿಗಲಿದೆ. ದೊಡ್ಡಬಳ್ಳಾಪುರವನ್ನು ನಿರ್ಲಕ್ಷಿಸಿಲ್ಲ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.