ಶೈಕ್ಷಣಿಕ ಪ್ರಗತಿಗೆ ಸೈಕಲ್ ಯೋಜನೆ ಸಹಕಾರಿ: ಎಸ್.ವೈ. ನಾಗರಾಜ್
ಸೂಲಿಬೆಲೆ: ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಹೆಚ್ಚಳಕ್ಕೆ ಸರ್ಕಾರದ ಸೈಕಲ್ ವಿತರಣೆ ಯೋಜನೆ ತುಂಬಾ ಸಹಕಾರಿಯಾಗಿದೆ. ಸೈಕಲ್‌ಗಳನ್ನು ದುರ್ಬಳಕೆ ಮಾಡಿಕೊಳ್ಳದೇ ಸಕಾಲಕ್ಕೆ ತಪ್ಪದೇ ಶಾಲೆಗೆ ಆಗಮಿಸುವ ಮುಖೇನ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳುವಂತೆ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಎಸ್.ವೈ ನಾಗರಾಜ್ ಹೇಳಿದ್ದಾರೆ.
ಸೂಲಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಶುಕ್ರವಾರ ನಡೆದ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾ.ಪಂ ಅಧ್ಯಕ್ಷ ಕೆ.ನಾರಾಯಣಪ್ಪ ಮಾತನಾಡಿ, ವ್ಯಕ್ತಿಯ ವ್ಯಕ್ತಿತ್ವ ಬದಲಾವಣೆಗೆ ಕಲಿಕೆ ಮಹತ್ವದ ಪಾತ್ರ ವಹಿಸುತ್ತದೆ. ಪೋಷಕರು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಬೇಕು. ಸರ್ಕಾರ ಅನೇಕ ಯೋಜನೆಗಳನ್ನು ಶಿಕ್ಷಣಕ್ಕಾಗಿ ನೀಡುತ್ತಿದ್ದು,ಇದನ್ನು ಸಮರ್ಪಕವಾಗಿ ಬಳಿಸಿಕೊಳ್ಳಬೇಕು ಎಂದರು. ಗ್ರಾಪಂ ಮಾಜಿ ಅಧ್ಯಕ್ಷ ಆರ್.ಮುನಿರಾಜ್, ಪೌಂಡೇಷನ್ ಸಂಸ್ಥೆಯ ಚಂದ್ರಶೇಖರ್ ಮಾತನಾಡಿದರು. ಹಿರಿಯ ಮುಖಂಡ ಮರುವೆ ಕೃಷ್ಣಪ್ಪ, ಗ್ರಾಪಂ ಸದಸ್ಯ ಮುನಿರಾಜ್, ಸದಸ್ಯೆ ಲಕ್ಷಮ್ಮ, ಸಿಆರ್ಪಿ ಮುತ್ತುರಾಜ್, ಮುಖ್ಯ ಶಿಕ್ಷಕಿ ಓಂಕಾರಮ್ಮ, ಶಾಲಾಭಿವೃದ್ಧಿ ಸಮಿತಿ ಸದಸ್ಯ ಶ್ರೀನಿವಾಸ್, ವಾಸುದೇವ್, ಮುಖಂಡ ಎಸ್.ಆರ್ ಉಮೇಶ್, ನಿವೃತ್ತ ಮುಖ್ಯ ಶಿಕ್ಷಕ ಮುನಿಶಾಮಯ್ಯ, ಜಬೀನ್ ತಾಜ್ ಸೇರಿದಂತೆ ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಗ್ರಾಮದ ಮುಖಂಡರು, ಶಿಕ್ಷಕ ವರ್ಗದವರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

