ದೇವನಹಳ್ಳಿ ಲಯನ್ಸ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರ
ದೇವನಹಳ್ಳಿ: ಇಲ್ಲಿನ ಲಯನ್ಸ್ ಮತ್ತು ಲಯನೆಸ್ ಸಂಸ್ಥೆ ಹಾಗೂ ಲಯನ್ಸ್ ಸೇವಾ ಪ್ರತಿಷ್ಠಾನ, ದೇವನಹಳ್ಳಿ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಮತ್ತು ಜೈ ಭುವನೇಶ್ವರಿ ಆಟೋ ಚಾಲಕರ ಸಂಘ ಸಂಯುಕ್ತ ಆಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಇಲ್ಲಿನ ಲಯನ್ಸ್ ಸೇವಾಭವನದಲ್ಲಿ ಆಯೋಜಿಸಿದ್ದರು.
ಶಿಬಿರದ ಉಧ್ಘಾಟನೆಯನ್ನು ದೇವನಹಳ್ಳಿ ಕ್ರೀಡಾ ಸಂಘದ ಅಧ್ಯಕ್ಷ ಹಾಗೂ ಪುರಸಭಾ ಸದಸ್ಯ ಬಿ.ದೇವರಾಜ್ ನೆರವೇರಿಸಿ ಲಯನ್ಸ್ ಸಂಸ್ಥೆಯವರು ಆಯೋಜಿಸುವ ಆರೋಗ್ಯ ಶಿಬಿರಗಳಿಗೆ ತಮ್ಮ ಸಂಘದ ಸಹಕಾರ ನೀಡುವುದಾಗಿ ತಿಳಿಸಿದರಲ್ಲದೆ ಗ್ರಾಮೀಣ ಭಾಗದ ಜನರು ಶಿಬಿರದ ಲಾಭ ಪಡೆಯಬೇಕು ಎಂದು ತಿಳಿಸಿದರು.
ಲಯನ್ಸ್ ಬ್ಲಡ್ ಬ್ಯಾಂಕಿನ ಡಾ.ದೀಪಕ್ ಸುಮನ್ ಮಾತನಾಡಿ ಒಬ್ಬ ವ್ಯಕ್ತಿ ತನ್ನ ರಕ್ತದಾನ ಮಾಡುವುದರಿಂದ ಮೂವರು ರೋಗಿಗಳಿಗೆ ಉಪಯೋಗವಾಗುತ್ತದೆ ಎಂದರಲ್ಲದೆ ಆರೋಗ್ಯವಾಗಿರುವ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ತಮ್ಮ ರಕ್ತದಾನ ಮಾಡಬಹುದಾಗಿದೆ. ಇದರಿಂದ ಅನೇಕ ಅಮಾಯಕ ಜೀವಗಳನ್ನು ಉಳಿಸಬಹುದಾಗಿದೆ. ಅಲ್ಲದೆ ರಕ್ತದಾನ ಮಾಡಿದವರು ಅವರ ಕುಟುಂಬದ ಸದಸ್ಯರಿಗೆ ರಕ್ತ ಬೇಕಾದಲ್ಲಿ ನಮ್ಮ ರಕ್ತನಿಧಿಯಿಂದ ಉಚಿತವಾಗಿ ಪಡೆಯಬಹುದಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

