ಬೆಂಗಳೂರು ಗ್ರಾಮಾಂತರ

ಭಾರತ ಕಟ್ಟಲು ಯುವಕರೇ ಮುಂದಾಗಿ: ಬಿ.ಎನ್. ಬಚ್ಚೇಗೌಡ

Published On :


ಸೂಲಿಬೆಲೆ: ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಯುಪಿಎ ಸರ್ಕಾರ 10 ವರ್ಷಗಳಲ್ಲಿ 100ಕ್ಕೂ ಹೆಚ್ಚು ಹಗರಣಗಳಿಂದ ಸಾವಿರಾರು ಕೋಟಿ ಭ್ರಷ್ಟಚಾರ ನಡೆಸಿದೆ. ಬದಲಾವಣಿಗೆ ಜನ ಆಸಕ್ತಿ ತೋರಿದ್ದು, ಕಾಂಗ್ರೆಸ್ ಮುಕ್ತ ಭಾರತವನ್ನು ಕಟ್ಟಲು ಯುವಕರು ಮುಂದಾಗಬೇಕು ಎಂದು ಮಾಜಿ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದ್ದಾರೆ. ಸೂಲಿಬೆಲೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಶನಿವಾರ ಗ್ರಾಮಾಂತರ ಜಿಲ್ಲಾ ಯುವ ಮೋರ್ಚಾ ಘಟಕದ ವತಿಯಂದ ಅಟಲ್ ಬಿಹಾರಿ ವಾಜಪೇಯಿ ಜನ್ಮ ದಿನಾಚರಣಿ ಅಂಗವಾಗಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಸುಭದ್ರ ಸರ್ಕಾರ ಮತ್ತು ಅಭಿವೃದ್ಧಿಗೆ ಕೇಂದ್ರದಲ್ಲಿ ಉತ್ತಮ ಆಡಳಿತವನ್ನು ಜನ ನಿರೀಕ್ಷೆ ಮಾಡುತ್ತಿದ್ದು,ನಮೋ ಅಲೆ ಬೀಸುತ್ತಿದೆ.ಕೋಮವಾದಿ ಎಂದು ಬಿಜೆಪಿಯನ್ನು ಟೀಕಿಸುತ್ತಿರುವ ಕಾಂಗ್ರೆಸ್ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ. ಬಿಜೆಪಿ ಎಂದಿಗೂ ಕೋಮುವಾದಿತನ ತೋರಿಲ್ಲ.ಬಿಜೆಪಿ ಆಡಳಿತ ನಡೆಸಿ ರಾಜ್ಯಗಳಲ್ಲಿ ಮುಸ್ಲಿಮರಿಗೆ ತೊಂದರೆಯಾಗಿಲ್ಲ ಎಂದರು.
ಮೊಯ್ಲಿಯವರನ್ನು ಆಯ್ಕೆ ಮಾಡಿದ ಜನರಿಗೆ ಭ್ರಮನಿರಸನವಾಗಿದೆ. ಹೊಸಕೋಟೆ ಕ್ಷೇತ್ರದಲ್ಲಿ ಹೊಸ ಸರ್ಕಾರದಿಂದ ಒಂದಿ ನಯಾ ಪೈಸೆ ಕೆಲಸ ಆಗಿಲ್ಲ. ನಾನು ಶಾಸಕ, ಮಂತ್ರಿಯಾಗಿದ್ದ ಅವಧಿಯಲ್ಲಿ ಮಂಜೂರು ಮಾಡಿಸಿದ್ದ ಕೆಲಸಗಳಿಗೆ ಗುದ್ದಲಿಪೂಜೆ ಕಾರ್ಯಗಳಾಗುತ್ತಿವೆ ಅಷ್ಟೇ. ಈ ಮಾತು ನಾನು ಹೊಟ್ಟೆಕ್ಕಿಚ್ಚಿನಿಂದ ಹೇಳುತ್ತಿಲ್ಲ. ಕ್ಷೇತ್ರದ ಜನ ಹೇಳುತ್ತಿದ್ದಾರೆ ಎಂದರು.
ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಫುಲ್, ಮಾಲಾ, ಬೈರೇಗೌಡ, ಕೊರಳೂರು ಸುರೇಶ್, ರಿಗೀಶ್, ವಿನೋದರೆಡ್ಡಿ, ಗ್ರಾಪಂ ಅಧ್ಯಕ್ಷ ಕೆ.ನಾರಾಯಣಪ್ಪ, ಮಾಜಿ ಅಧ್ಯಕ್ಷ ಮುನಿರಾಜ್, ವೆಂಕಟೇಗೌಡ, ವಾಜೀದ್ ಮೊದಲಾದವರು ಹಾಜರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.