ಬೆಂಗಳೂರು ಗ್ರಾಮಾಂತರ

ಜ.4 ರ ವರೆಗೆ ಅವಧಿ ವಿಸ್ತರಣೆ

Published On :

ರಾಮನಗರ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ 2013-14ನೇ ಸಾಲಿಗೆ ಬಿಎ, ಬಿಕಾಂ, ಎಂಎ, ಎಂಕಾಂ, ಎಂಎ, ಎಂಸಿಎ, ಎಂಎಸ್ಸಿ ಡಿಪ್ಲೊಮಾ ಸರ್ಟಿಫಿಕೇಟ್ ಕೋರ್ಸುಗಳಿಗೆ ಪ್ರವೇಶಾತಿಯನ್ನು ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ರು.400ರ ದಂಡ ಶುಲ್ಕದೊಂದಿಗೆ ಜ.4 ರವರೆಗೆ ವಿಸ್ತರಿಸಲಾಗಿದೆ. ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು ಈ ವಿಸ್ತರಣೆಯ ಸದುಪಯೋಗ ಪಡೆದುಕೊಳ್ಳಬೇಕೆಂದು ಕ.ರಾ.ಮು.ವಿ ಪ್ರಾದೇಶಿಕ ಕೇಂದ್ರದ ಪ್ರಾದೇಶಿಕ ನಿರ್ದೇಶಕರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ, ಶಾಂತಿನಿಕೇತನ ಸಮೂಹ ಶಿಕ್ಷಣ ಸಂಸ್ಥೆ, ಬಿ.ಎಂ.ರಸ್ತೆ, ರಾಮನಗರ ದೂ.080-27274443, ಮೊ.9620973666 ಸಂಪರ್ಕಿಸಬಹುದು.
ನೇರ ನೇಮಕಾತಿ ಮೂಲಕ ಆಯ್ಕೆ
ರಾಮನಗರ: ರಾಮನಗರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗೆ ನೇರ ನೇಮಕಾತಿ ಮೂಲಕ 30 ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಆದೇಶದ ಪ್ರತಿಯನ್ನು ಕಳುಹಿಸಲಾಗುವುದು. ಹೆಚ್ಚಿನ ಮಾಹಿತಿಗೆ ರಾಮನಗರ ಜಿಲ್ಲೆಯ ಜಿಲ್ಲಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು.
ಸರ್ವಿಸಿಂಗ್ ತರಬೇತಿ  ಉಚಿತ
ರಾಮನಗರ: ಬಿಡದಿಯ ವಾಜರಹಳ್ಳಿಯಲ್ಲಿರುವ ಕೆನರಾ ಬ್ಯಾಂಕ್ ಎಡಿಪೈ ಗ್ರಾಮೀಣಾಭಿವೃದ್ಧಿ ತರಬೇತಿ ಸಂಸ್ಥೆಯಿಂದ ಆಸಕ್ತ ನಿರುದ್ಯೋಗಿ ಯುವಕರಿಗೆ ಸ್ವ ಉದ್ಯೋಗ ಪ್ರಾರಂಭಿಸಲು ಬಹುವಿಧ ಮೊಬೈಲ್ ಫೋನುಗಳ ಸರ್ವಿಸಿಂಗ್ ಉಚಿತ ತರಬೇತಿ ಏರ್ಪಡಿಸಲಾಗಿದೆ. ಅಭ್ಯರ್ಥಿಗಳು ಕನಿಷ್ಠ 7ನೇ ತರಗತಿವರೆಗೆ ವಿದ್ಯಾಭ್ಯಾಸ ಪಡೆದಿರಬೇಕು. 18 ರಿಂದ 35 ವರ್ಷದೊಳಗಿರಬೇಕು. 30 ದಿನಗಳು ನಡೆಯುವ ತರಬೇತಿಯು ಸಂಸ್ಥೆಯ ಆವರಣದಲ್ಲಿಯೇ ನಡೆಯಲಿದ್ದು, ಹಾಜರಾತಿ ಕಡ್ಡಾಯವಾಗಿದೆ. ತರಬೇತಿ ವೇಳೆ ಶಿಬಿರಾರ್ಥಿಗಳಿಗೆ ಉಚಿತ ಊಟ ಹಾಗೂ ವಸತಿ ಸೌಕರ್ಯ ಒದಗಿಸಲಾಗುವುದು. ಆಸಕ್ತರು ಭರ್ತಿ ಮಾಡಿದ ಅರ್ಜಿಯನ್ನು ತಮ್ಮ ಇತ್ತೀಚಿನ 3 ಭಾವಚಿತ್ರಗಳು, ರೇಷನ್ ಕಾರ್ಡ್ನ ನಕಲು ಹಾಗೂ ಪರೀಕ್ಷೆಯ ಅಂಕಪಟ್ಟಿಯ ನಕಲಿನೊಂದಿಗೆ ನೇರವಾಗಿ ಸಂಸ್ಥೆಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ನಿರ್ದೇಶಕರ ಮೊ.9740648830, 9900168985 ಸಂಪರ್ಕಿಸಿ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.