ಯಲಿಯೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಬೈಸಿಕಲ್ ವಿತರಣೆ
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಯಲಿಯೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 2012 -13 ನೇ ಸಾಲಿನಲ್ಲಿ ಎಂಟನೆಯ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ, ಸಮವಸ್ತ್ರ ಹಾಗೂ ಬೈಸಿಕಲ್ ವಿತರಣೆ ಅಲ್ಲದೆ ಶಾಲೆಯ ಪ್ರವೇಶ ದ್ವಾರದ ಉದ್ಘಾಟನಾ ಸಮಾರಂಭ ಶಾಲಾಭಿವೃದ್ಧಿ ಸಮಿತಿಯವರು ಸೋಮವಾರ ಆಯೋಜಿಸಿದ್ದರು.
ಉದ್ಘಾಟನೆಯನ್ನು ಶಾಸಕ ಪಿಳ್ಳಮುನಿಶಾಮಪ್ಪ ನೆರವೇರಿಸಿ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ 18500 ಕೋಟಿ ರು. ವೆಚ್ಚ ಮಾಡುತ್ತಿದ್ದು ಇದರಲ್ಲಿ ಮಕ್ಕಳಿಗೆ ಬೈಸಿಕಲ್, ಕ್ಷೀರಭಾಗ್ಯ, ಬಿಸಿಯೂಟ, ಸಮವಸ್ತ್ರ ಅಲ್ಲದೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡುತ್ತಿರುವುದು ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ. ಎಲ್ಲ ಮಕ್ಕಳು ವಿದ್ಯಾವಂತರಾಗಬೇಕೆಂದು ಯೋಜನೆಗಳನ್ನು ರೂಪಿಸಿದೆ ಎಂದರು.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ರಾಜಣ್ಣ ಮಾತನಾಡಿ ಈ ಶಾಲೆಯ ಪ್ರವೇಶ ದ್ವಾರಕ್ಕಾಗಿ ಜಿಲ್ಲಾ ಪಂಚಾಯಿತಿಯಿಂದ 2.40 ಲಕ್ಷ ರು. ಬಿಡುಗಡೆ ಮಾಡಿಸಿರುವುದಾಗಿ ತಿಳಿಸಿ ಯಲಿಯೂರು ಅಗ್ರಹಾರದ ರಸ್ತೆಗೆ 15 ಲಕ್ಷ ರು. ಮಂಜೂರಾಗಿದೆ ಎಂದು ತಿಳಿಸಿ ಚನ್ನರಾಯಪಟ್ಟಣ ಹೋಬಳಿಯಲ್ಲಿ ಎರಡು ಸರ್ಕಾರಿ ಪ್ರೌಢಶಾಲೆಗಳಿದ್ದು ಎಸ್ಎಸ್ಎಲ್ಸಿ ಪರೀಕ್ಷೆಗಳಲ್ಲಿ ಶೇ. ನೂರು ಫಲಿತಾಂಶ ಬರಲು ಮಕ್ಕಳ ತಂದೆ ತಾಯಿಅಲ್ಲದೆ ಶಾಲಾಭಿವೃದ್ಧಿ ಸಮಿತಿಯವರು ಜವಾಬ್ದಾರಿ ತೆಗೆದುಕೊಳ್ಳಬೇಕೆಂದು ತಿಳಿಸಿದರು.
ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ವಿ.ಮುನಿಯಪ್ಪ ವಹಿಸಿದ್ದರು. ಶಾಲೆಯ ಮುಖ್ಯ ಶಿಕ್ಷಕ ವೈ.ಕೆ. ಹೊನ್ನಪ್ಪ ಪ್ರಸ್ತಾವಿಕ ಭಾಷಣ ಮಾಡಿ ಶಾಲೆಯ ಪ್ರಗತಿ ಬಗ್ಗೆ ತಿಳಿಸಿದರು, ಶಿಕ್ಷಕರಾದ ರಮೇಶ್ ಸ್ವಾಗತ ಕೋರಿದರು. ಸಮಾರಂಭದಲ್ಲಿ ಬಿಇಒ ಮುನಿರಾಜು, ಗ್ರಾಮದ ಮುಖಂಡರಾದ ಹನುಮಂತರಾಯಪ್ಪ, ಆನಂದಗೌಡ, ರಾಮಾಂಜಿನಪ್ಪ, ಶಾಲಾಭಿವೃದ್ಧಿ ಅಧ್ಯಕ್ಷ ಚನ್ನಕೃಷ್ಣಪ್ಪ, ತಾಲೂಕು ಜೆಡಿಎಸ್ ಅಧ್ಯಕ್ಷ ಮುನಿಶಾಮಯ್ಯ, ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ದೈಹಿಕ ಶಿಕ್ಷಕ ಅಶ್ವತ್ಥನಾರಾಯಣಸ್ವಾಮಿ, ಚಿಕ್ಕಬಳ್ಳಾಪುರದ ಶಿಕ್ಷಕ ವೆಂಕಟೇಶ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

