ಡಿಕೆಶಿಗೆ ಸಚಿವ ಸ್ಥಾನ ಲಭ್ಯವಾಗದ ಕುರಿತು ಅಸಮಾಧಾನ
ರಾಮನಗರ: ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಸ್ಥಾನ ಲಭಿಸದ ಬಗ್ಗೆ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸಯ್ಯದ್ ಜಿಯಾವುಲ್ಲಾ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿಯ ಸಾಮಾನ್ಯ ಸಭೆಯಲ್ಲಿ ಅಸಮಾಧಾನ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಯಾವುಲ್ಲಾ ಅವರು ಡಿ.ಕೆ.ಶಿವಕುಮಾರ್ ಅವರಿಗೆ ಸಚಿವ ಸ್ಥಾನ ನೀಡದಿರುವ ಬಗ್ಗೆ ಕಾರ್ಯಕರ್ತರಲ್ಲಿ ಬೇಸರವಿದ್ದರೂ ಕೂಡ ಯಾವುದೇ ಪ್ರತಿಭಟನೆಗಿಳಿಯದೆ ಹೈಕಮಾಂಡ್ನ ಆದೇಶ ಪಾಲಿಸಿರುವುದಕ್ಕೆ ಧನ್ಯವಾದ ಅರ್ಪಿಸಿದರು.
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಗೆ ಒತ್ತು ನೀಡಬೇಕು. ನಾಲ್ಕೂ ತಾಲೂಕುಗಳಲ್ಲಿಯೂ ಸಭೆಗಳನ್ನು ನಡೆಸಲು ನಿರ್ಧರಿಸಿದ್ದು, ಮುಂದಿನ ಕಾರ್ಯಕಾರಿ ಸಭೆ ಮಾಗಡಿಯಲ್ಲಿ ನಡೆಯಲಿದೆ. ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಿ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಲಾಗುವುದು ಎಂದರು.
ಡಿಕೆಶಿಯವರಿಗೆ ಸಚಿವ ಸ್ಥಾನ ನೀಡುವ ವಿಷಯದಲ್ಲಿ ಹೈಕಮಾಂಡ್ ಸಕಾರಾತ್ಮಕ ಧೋರಣೆ ಹೊಂದಿದ್ದು, ಇನ್ನೊಂದು ವಾರದಲ್ಲಿ ಸಚಿವ ಸ್ಥಾನ ನೀಡುವ ಸಾಧ್ಯತೆ ಇದೆ. ಈ ವಿಷಯದ ಬಗ್ಗೆ ಹೆಚ್ಚು ತಲೆ ಕೆಡಿಸಿಕೊಳ್ಳದೆ ಪಕ್ಷ ಸಂಘಟನೆಗೆ ಹೆಚ್ಚಿನ ಗಮನ ಹರಿಸುವಂತೆ ಮಾಜಿ ಶಾಸಕ ಸಿ.ಎಂ.ಲಿಂಗಪ್ಪ ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅನ್ನಭಾಗ್ಯ, ಶಾದಿಭಾಗ್ಯ, ಮನಸ್ವಿನಿ, ಸಾಲಮನ್ನಾದಂತ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಜನಮನ್ನಣೆ ಗಳಿಸಿದೆ. ಇದನ್ನು ಸದುಪಯೋಗಪಡಿಸಿಕೊಂಡು ಮತಗಳನ್ನಾಗಿ ಪರಿವರ್ತಿಸಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರವಿ ಕಾರ್ಯಕರ್ತರಿಗೆ ಕರೆ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಪ್ರಮುಖ ಕಾರಣ ಕರ್ತರಾಗಿದ್ದಾರೆ. ಅಂತಹ ಸಮರ್ಥ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸಂಪುಟದಲ್ಲಿ ಅವಕಾಶ ನೀಡದಿರುವುದು ಜಿಲ್ಲೆಯ ಕಾಂಗ್ರೆಸ್ಸಿಗರಲ್ಲಿ ಬೇಸರ ಉಂಟು ಮಾಡಿದೆ. ಮುಖ್ಯಮಂತ್ರಿಗಳು ಇದೇ ಧೋರಣೆ ಮುಂದುವರಿಸಿದರೆ ಮುಂದಿನ ಲೋಕಸಭಾ ಚುನಾವಣೆಗೆ ಸ್ವಾತಂತ್ರ ಹೋರಾಟಗಾರರು ಮತ್ತು ಹಿರೇಮಠ್ ಅಂಥವರೊಂದಿಗೆ ಚುನಾವಣೆ ಎದುರಿಸಬೇಕಾಗುತ್ತದೆ ಎಂದು ಮುಖಂಡ ಎ.ಸಿ.ವಿರೇಗೌಡ ಅಸಮಧಾನ ವ್ಯಕ್ತಪಡಿಸಿದರು. ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ವಿ.ಶ್ರೀನಿವಾಸ್, ಮಾಧ್ಯಮ ವಕ್ತಾರ ಮರಸಪ್ಪ ರವಿ ಸೇರಿದಂತೆ ನಾಲ್ಕೂ ತಾಲೂಕುಗಳ ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

