ನಾಳೆ ಬೆಂಗಳೂರಲ್ಲಿ ಆರ್ಯವೈಶ್ಯ ಸಮಾವೇಶ
ರಾಮನಗರ: ಆರ್ಯವೈಶ್ಯ ಜನಾಂಗ ಸಂಘಟಿಸುವ ಉದ್ದೇಶದಿಂದ ಫೆ.3ರಂದು ಬೆಂಗಳೂರಿನಲ್ಲಿ ಬೃಹತ್ ರಾಜಕೀಯ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಆರ್ಯ ವೈಶ್ಯ ಮಹಾಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳು ತಿಳಿಸಿದ್ದಾರೆ. ರಾಜಕೀಯ ಪಕ್ಷಗಳು ರಾಜಕೀಯ ಲಾಭಕ್ಕಾಗಿ ಆರ್ಯವೈಶ್ಯ ಜನಾಂಗವನ್ನು ಬಳಸಿಕೊಂಡಿವೆಯೇ ಹೊರತು ಜನಾಂಗಕ್ಕೆ ಇದುವರೆವಿಗೂ ಸೂಕ್ತ ರಾಜಕೀಯ ಸ್ಥಾನಮಾನಗಳನ್ನು ನೀಡಿಲ್ಲ. ಹೀಗಾಗಿ ಜನಾಂಗವು ರಾಜಕೀಯವಾಗಿ ಹಿಂದುಳಿದಿದೆ. ಈ ಸಂಬಂಧ ಜನಾಂಗದವರಿಗೆ ರಾಜಕೀಯ ಜಾಗೃತಿ ಮೂಡಿಸುವ ಸಲುವಾಗಿ ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಆರ್ಯವೈಶ್ಯರು ಮೂಲತಃ ವ್ಯಾಪಾರಿ ವೃತ್ತಿಯಲ್ಲಿ ತೊಡಗಿಕೊಂಡಿದ್ದಾರೆ. ಶಿಕ್ಷಣ, ವೈದ್ಯಕೀಯ, ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಜತೆಗೆ ಉತ್ತೇಜನ ನೀಡುತ್ತಾ ಬಂದಿದ್ದೇವೆ ಎಂದಿದ್ದಾರೆ. ಬೆಂಗಳೂರಿನ ಎನ್.ಆರ್. ಕಾಲೋನಿಯ ಎ.ಪಿ.ಎಸ್. ಕಾಲೇಜು ಮೈದಾನದಲ್ಲಿ ನಡೆಯುವ ಈ ಸಮಾವೇಶದಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರಮೂರ್ತಿ, ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ, ಸಚಿವ ಸುರೇಶ್ ಕುಮಾರ್, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತಿತರರು ಭಾಗವಹಿಸುವರು. ಸಮಾವೇಶದಲ್ಲಿ ಜಿಲ್ಲೆಯ ಆರ್ಯವೈಶ್ಯ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ಆರ್ಯವೈಶ್ಯ ಮಹಾಸಭಾದ ಜಿಲ್ಲಾ ಘಟಕದ ಪದಾಧಿಕಾರಿಗಳು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

