ಬೆಂಗಳೂರು ಗ್ರಾಮಾಂತರ

ಪೂಜೇರಾಮನಹಳ್ಳಿ ತಂಡಕ್ಕೆ ಕ್ರಿಕೆಟ್ ಕಪ್

Published On :

ಸೂಲಿಬೆಲೆ: ಇಲ್ಲಿಗೆ ಸಮೀಪದ ನಂದಗುಡಿ ಹೋಬಳಿಯ ಸಿಟಿ ಗೊಲ್ಲಹಳ್ಳಿ ಗ್ರಾಮದಲ್ಲಿ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪೂಜೇರಾಮನಹಳ್ಳಿ ತಂಡ ಫೈನಲ್ ಪಂದ್ಯದಲ್ಲಿ ವಿಜೇತರಾಗಿ ರು.10ಸಾವಿರ ನಗದು ಹಾಗೂ ಟ್ರೋಫಿಯನ್ನು ಗೆದ್ದುಕೊಂಡಿದೆ.
ವಿಜೇತ ತಂಡಕ್ಕೆ ಬಹುಮಾನಗಳನ್ನು ವಿತರಿಸಿದ ಮಾಜಿ ಶಾಸಕ ಎನ್.ನಾಗರಾಜ್, ಗ್ರಾಮೀಣ ಭಾಗದಲ್ಲಿರುವ ಯುವಕರು ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಂಡು ದೈಹಿಕ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು. ಕ್ರೀಡೆಯಿಂದ ಮಾನಸಿಕ ನೆಮ್ಮದಿ ದೊರೆಯುತ್ತದೆ. ರಾಜ್ಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಗ್ರಾಮೀಣ ಭಾಗದ  ಕ್ರೀಡಾಪಟುಗಳು ಖ್ಯಾತಿಯನ್ನು ಪಡೆದಿದ್ದು, ಕ್ರೀಡೆ ಮನೋಶಕ್ತಿ ಹೆಚ್ಚಿಸಲು ಸಹಕಾರಿಯಾಗಿದೆ ಎಂದರು.
ಪೂಜೇರಾಮನಹಳ್ಳಿ ತಂಡ ರು.10 ಸಾವಿರ ನಗದು ಹಾಗೂ ಟ್ರೋಫಿಯನ್ನು ಪ್ರಥಮ ಬಹುಮಾನವಾಗಿ ಗೆದ್ದುಕೊಂಡರೆ, ಸಿಟಿ ಗೊಲ್ಲಹಳ್ಳಿ ತಂಡ ರು.5ಸಾವಿರ ನಗದು ಟ್ರೋಫಿಯನ್ನು ಪಡೆಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.