ನಾಪತ್ತೆಯಾದ ವಿದ್ಯಾರ್ಥಿನಿಯರು ಸಾಗರದಲ್ಲಿ ಪತ್ತೆಯಾದರು
ಚನ್ನಪಟ್ಟಣ: ಕಳೆದ ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಟ್ಟಣದ ಸಮಾಜಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದ ಮೂವರು ವಿದ್ಯಾರ್ಥಿನಿಯರ ಸುಳಿವು ಪತ್ತೆಯಾಗಿದೆ.
ನಾಪತ್ತೆಯಾಗಿದ್ದ ಅರ್ಚನಾ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇರುವುದಾಗಿ ಪೊಲೀಸರಿಗೆ ಖಚಿತ ಮಾಹಿತಿ ದೊರೆತರೆ ಮತ್ತಿಬ್ಬರು ವಿದ್ಯಾರ್ಥಿನಿಯರಾದ ಅನಿತಾ ಮತ್ತು ಪವಿತ್ರ ಮೈಸೂರಿನಲ್ಲಿ ಇರುವುದಾಗಿ ಮಾಹಿತಿ ಲಭ್ಯವಾಗದೆ. ಬಾಲಕಿಯರನ್ನು ಕರೆತರಲು ಈಗಾಗಲೇ ಪೊಲೀಸ್ ತಂಡ ತೆರಳಿದ್ದು ಸೋಮುವಾರ ಪುರ ಪೊಲೀಸ್ ಠಾಣೆಗೆ ಬಾಲಕಿಯರನ್ನು ಕರೆತರುವುದಾಗಿ ಪೊಲೀಸ್ ಮೂಲಗಳು ಮಾಹಿತಿ ನೀಡಿವೆ. ಕಾಣೆಯಾಗಿದ್ದ ಬಾಲಕಿಯರನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ ಬಳಿಕ ನಾಪತ್ತೆ ಪ್ರಕರಣದ ಸಂಪೂರ್ಣ ಮಾಹಿತಿ ದೊರೆಯಲಿದೆ. ಕಾಣೆಯಾದ ಬಾಲಕಿಯರ ಪತ್ತೆಗೆ ನಾಲ್ಕು ತಂಡಗಳನ್ನು ರಚಿಸಿ ಚುರುಕಿನ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು, ಪೊಲೀಸರ ಕಾರ್ಯಾಚರಣೆಗೆ ಕೊನೆಗೂ ಫಲ ದೊರೆತಿದೆ.
ಮಕ್ಕಳ ಹಕ್ಕುಗಳ ಸಮಿತಿ ಸದಸ್ಯ ಭೇಟಿ: ವಿದ್ಯಾರ್ಥಿನಿಯರು ನಾಪತ್ತೆ ಯಾದ ಹಿನ್ನೆಲೆಯಲ್ಲಿ ಪಟ್ಟಣದ ಸಮಾಜಕಲ್ಯಾಣ ಇಲಾಖೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ಭಾನುವಾರ ಮಕ್ಕಳ ಹಕ್ಕುಗಳ ಸಮಿತಿ ಸದಸ್ಯ ಶಿವಲಿಂಗಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇನ್ನಿಬ್ಬರ ಪತ್ತೆ ಏನಾಯ್ತು: ತಾಲೂಕಿನ ಜಗಾದಾಪುರ ಗ್ರಾಮದ ಇಬ್ಬರು ಅಪ್ರಾಪ್ತ ಯುವತಿಯರ ನಾಪತ್ತೆ ಪ್ರಕರಣ ನಿಗೂಢವಾಗೇ ಉಳಿದಿದ್ದು ಬಾಲಕಿಯರ ಪತ್ತೆಗೆ ಅಕ್ಕೂರು ಪೊಲೀಸರು ಚುರುಕಿನ ಶೋಧಕಾರ್ಯ ನಡೆಸುತ್ತಿದ್ದಾರಾದರೂ ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

