'ಸ್ವಸ್ಥ ಸಮಾಜಕ್ಕೆ ಎಲ್ಲರ ಪಾತ್ರವೂ ಮುಖ್ಯ'
ದೇವನಹಳ್ಳಿ: ಅಪರಾಧ ಮುಕ್ತ ಸಮಾಜ ನಿರ್ಮಾಣದಲ್ಲಿ ಪೋಷಕರ ಪಾತ್ರ ಪ್ರಮುಖವಾಗಿದೆ ಎಂದು ದೇವನಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ಸಿ.ಕನಕಕುಮಾರ್ ಕಿವಿಮಾತು ಹೇಳಿದ್ದಾರೆ. ಕನ್ನಮಂಗಲ ಎಂವಿಎಂ ಶಾಲೆಯ ಚಿಣ್ಣರ ಹಬ್ಬ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಶಿಕ್ಷಣ ಸಂಸ್ಥೆ ಅಧ್ಯಕ್ಷ ಕೆ.ಶ್ರೀನಿವಾಸ್ ಮಾತನಾಡಿ, ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳುವ ಶಕ್ತಿ ಪೋಷಕರಿಗೆ ಬರಬೇಕು ಮತ್ತು ಇಂದಿನ ಆಧುನಿಕತೆ ದಿನಗಳಲ್ಲಿ ತಂದೆ ತಾಯಿಗಳಿಗೆ ತಮ್ಮ ಮಕ್ಕಳನ್ನು ಸಾಕುವ ಬಗ್ಗೆ ತರಬೇತಿ ಅಗತ್ಯವಾಗಿದೆ ಎಂದರು.
ಶಾಸಕ ವೆಂಕಟಸ್ವಾಮಿ ಮಾತನಾಡಿ, ಇಂದಿನ ದಿನಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆ ನಡೆಸುವುದು ಕಷ್ಟವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾಸಂಸ್ಥೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಅಭಿನಂದನೀಯ ಎಂದರು. ಇದೆ ಸಂದರ್ಭದಲ್ಲಿ ಇ.ಎಂ.ರಾಜು ದಂಪತಿಯನ್ನು ಸನ್ಮಾನಿಸಲಾಯಿತು. ಕೆ.ಸಿ.ಲೋಕೇಶ್, ವಿನುತ ಸತೀಶ್, ಪಟಾಲಪ್ಪ, ರಾಧಾ ಶ್ರೀನಿವಾಸ್ ಮತ್ತಿರರರು ಉಪಸ್ಥತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

