ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಬಹುಮತ: ರಾಜೀವ್
ದೇವನಹಳ್ಳಿ: ಕರ್ನಾಟಕದ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಗಳಿಸಲಿದೆ ಎಂದು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷ ರಾಜೀವ್ ಸಾತವ್ ತಿಳಿಸಿದರು.
ಈ ಬಾರಿಯ ವಿಧಾನಸಭಾ ಚುನಾವಣೆಗೆ ನೂರಕ್ಕೂ ಹೆಚ್ಚು ಮಂದಿ ಯುವಕರಿಗೆ ಅವಕಾಶ ಕಲ್ಪಿಸಲಾಗುವುದು ಎಂದು ರಾಜೀವ್ ತಿಳಿಸಿದರು.
ಅವರು ತುಮಕೂರಿನಲ್ಲಿ ನಡೆಯುವ ರಾಜೀವ್ಗಾಂಧಿಯವರ ಕನಸಿನ ಕೂಸಾದ ಫಲಾನುಭವಿಗಳಿಗೆ ಸರ್ಕಾರದಿಂದ ಹಣ ನೇರ ವರ್ಗಾವಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಮಾರ್ಗ ಮಧ್ಯ ದೇವನಹಳ್ಳಿ ಪ್ರವಾಸಿ ಮಂದಿರಕ್ಕೆ ಆಗಮಿಸಿದ್ದರು.
ರಾಜ್ಯದ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಪ್ರಥಮ ಸ್ಥಾನ ಪಡೆದಿದ್ದು ಈ ಸರ್ಕಾರದ ವೈಫಲ್ಯಗಳನ್ನು ಕಳೆದ ಒಂದು ವರ್ಷದಿಂದ ಬಯಲಿಗೆ ಎಳೆದಿದ್ದೇವೆ ಎಂದು ಕರ್ನಾಟಕ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅವರು ತಿಳಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸವಲತ್ತುಗಳು ಜನ ಸಾಮಾನ್ಯರಿಗೆ ತಿಳಿಸಲು ಕಾಂಗ್ರೆಸ್ ಕಾರ್ಯಕರ್ತರು ಅರಿವು ಮೂಡಿಸಲಿದ್ದಾರೆ. ಕಾಂಗ್ರೆಸ್ ಮಾತ್ರ ಸುಭದ್ರ ಸರ್ಕಾರ ನೀಡಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್.ಬಚ್ಚೇಗೌಡ, ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ರಾಜಣ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಜಗನ್ನಾಥ್, ದೇವನಹಳ್ಳಿ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್, ಮುಖಂಡರಾದ ಚಂದ್ರಶೇಖರ್ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

