ಇಂದಿನಿಂದ ಎನ್ಎಸ್ಎಸ್ ಶಿಬಿರ
ರಾಮನಗರ: ಚನ್ನಪಟ್ಟಣದ ಕುವೆಂಪು ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸ್ವಯಂ ಸೇವಾ ಘಟಕವು ಫೆ.7 ರಿಂದ 13 ರವರೆಗೆ ಕಣ್ವ ಹಾಗೂ ಎಲೆಹೊಸಹಳ್ಳಿ ಗ್ರಾಮಗಳಲ್ಲಿ ವಿಶೇಷ ಶಿಬಿರವನ್ನು ಹಮ್ಮಿಕೊಂಡಿದೆ. ಈ ಶಿಬಿರದಲ್ಲಿ ಮಕ್ಕಳ ಗ್ರಾಮಸಭೆ, ರಂಗಗೀತೆಗಳ ಅಳಿವು-ಉಳಿವು, ಅಂತರ್ಜಲ ಸಂರಕ್ಷಣೆ ಹಾಗೂ ವೃದ್ಧಿ, ಮಾವು ಹಾಗೂ ತೆಂಗು ಬೆಳೆಗಳ ರಕ್ಷಣೆ, ಗ್ರಾಮೀಣ ಕಲೆಗಳಾದ ಸೋಬಾನೆ ಪದಗಳು, ಜನಪದ ಗೀತೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ತಜ್ಞರಿಂದ ಚರ್ಚೆ ನಡೆಸಲಾಗುವುದು. ಉಚಿತ ಆರೋಗ್ಯ ತಪಾಸಣಾ ಶಿಬಿರ, ಪಶು ಆರೋಗ್ಯ ತಪಾಸಣೆ, ಏಡ್ಸ್, ಮದ್ಯಪಾನ ನಿಯಂತ್ರಣಕ್ಕೆ ಬೀದಿ ನಾಟಕಗಳ ಮೂಲಕ ತಿಳುವಳಿಕೆ ಮೂಡಿಲಸು ಕಾರ್ಯಕ್ರಮಗಳು ನಡೆಯಲಿವೆ. ವಿಶೇಷವಾಗಿ ನೈರ್ಮಲ್ಯ ಕುರಿತು ಗ್ರಾಮೀಣರಿಗೆ ಅರಿವು ಮೂಡಿಸುವ ಪ್ರಯತ್ನ ನಡೆಯಲಿದೆ. ಶಿಬಿರವನ್ನು ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಉದ್ಘಾಟಿಸುವರು. ಕಾಲೇಜಿನ ಪ್ರಾಂಶುಪಾಲ ಪ್ರೊ. ಜೆ.ವಿ. ಶಿವರುದ್ರಯ್ಯ ಅಧ್ಯಕ್ಷತೆ ವಹಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಎಸ್.ಎಂ. ಚಂದ್ರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಡಾ. ಬಿ.ಕೃಷ್ಣ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸಿ.ವಿ.ಜಾರ್ಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗ್ರವಾಲ್, ಅಪರ ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ, ಕಾಲೇಜಿನ ಕಾರ್ಯದರ್ಶಿ ಆರ್.ಮಹೇಶ್ಚಂದ್ರ ಇತರರು ಭಾಗವಹಿಸುವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

