ಅಧಿಸೂಚನೆ ಹೊರಡಿಸದಂತೆ ಒತ್ತಾಯಿಸಿ ಆಂದೋಲನ
ರಾಮನಗರ: ರಾಜ್ಯಕ್ಕೆ ಮಾರಕವಾಗಲಿರುವ ಕಾವೇರಿ ನ್ಯಾಮಂಡಳಿಯ ಅಂತಿಮ ಆದೇಶದ ಅಧಿಸೂಚನೆ ಹೊರಡಿಸದಂತೆ ಒತ್ತಾಯಿಸಿ ಬೆಂಗಳೂರಿನಿಂದ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ನಡೆಸುತ್ತಿರುವ ಜನಾಂದೋಲನ ಯಾತ್ರೆಯು ಗುರುವಾರ ರಾಮನಗರಕ್ಕೆ ಆಗಮಿಸಿತು.
ಬಿಡದಿ ಮಾರ್ಗವಾಗಿ ನಗರಕ್ಕೆ ಆಗಮಿಸಿದ ಯಾತ್ರೆಯನ್ನು ಐಜೂರು ವೃತ್ತದಲ್ಲಿ ಸಾರ್ವಜನಿಕರು ಸ್ವಾಗತಿಸಿದರು. ಈ ವೇಳೆ ಮಾತನಾಡಿದ ವೇದಿಕೆಯ ರಾಜ್ಯಾಧ್ಯಕ್ಷ ರಮೇಶಗೌಡ, ಕನ್ನಡಿಗರು ಈಗಲೂ ಎಚ್ಚೆತ್ತುಕೊಳ್ಳದಿದ್ದಲ್ಲಿ ರಾಜ್ಯಕ್ಕೆ ಖಂಡಿತ ಅಪಾಯ ಎದುರಾಗಲಿದೆ ಎಂದು ಎಚ್ಚರಿಕೆ ನೀಡಿದರು.
ಕೇಂದ್ರದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರಕ್ಕೆ ಕರ್ನಾಟಕದ ಬಗ್ಗೆ ಕಿಂಚಿತ್ತಾದರೂ ಕಾಳಜಿ ಇದೆ ಎನ್ನುವುದಾದಲ್ಲಿ ಕಾವೇರಿ ಐತೀರ್ಪಿನ ಅಧಿಸೂಚನೆ ತಡೆಯಬೇಕು. ಇಲ್ಲವಾದಲ್ಲಿ ಮುಂಬರುವ ಚುನಾವಣೆಯಲ್ಲಿ ಪ್ರತಿಕೂಲ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಐತೀರ್ಪಿನ ಅಧಿಸೂಚನೆ ಹೊರಬಿದ್ದಲ್ಲಿ ರಾಜ್ಯದಲ್ಲಿ ತಮಿಳು ಸಿನೆಮಾಗಳ ಪ್ರದರ್ಶನ, ತಮಿಳು ನಾಡು ಸಾರಿಗೆ ಬಸ್ಗ ಸಂಚಾರ, ತಮಿಳುನಾಡು ಮೂಲದ ಹಾಲು ಸರಬರಾಜು ಬಂದ್ ಮಾಡಲಾಗುತ್ತದೆ. ಕೇಂದ್ರ ಸರ್ಕಾರಿ ಕಚೇರಿಗಳನ್ನು ಧ್ವಂಸಗೊಳಿಸಲಾಗುವುದು ಎಂದು ರಮೇಶಗೌಡ ಎಚ್ಚರಿಸಿದರು.
ಕಾವೇರಿ ವಿಚಾರವಾಗಿ ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಲೇ ಬಂದಿವೆ. ಈ ಧೋರಣೆ ಬದಲಾಗಬೇಕು ಎಂದು ಅವರು ಆಗ್ರಹಿಸಿದರು. ಯಾತ್ರೆಯೊಂದಿಗೆ ಸಂಘಟನೆ ಪದಾಧಿಕಾರಿಗಳಾದ ಯೋಗೇಶ್, ಶಂಕರ್, ರಂಜಿತ್ಗೌಡ, ಲಕ್ಷ್ಮಮ್ಮ, ಮಂಗಳಮ್ಮ, ನೀಲೇಶ್ಗೌಡ, ಶ್ರೀಧರ್ ಮತ್ತಿತರರು ಇದ್ದರು.
ಯಾತ್ರೆಯು ಗುರುವಾರ ರಾತ್ರಿ ಚನ್ನಪಟ್ಟಣ ತಲುಪಿದ್ದು, ಶುಕ್ರವಾರ ಬೆಳಗ್ಗೆ ಮದ್ದೂರು ಮಾರ್ಗವಾಗಿ ಮಂಡ್ಯ ತಲುಪಲಿದೆ. ಅಲ್ಲಿಂದ ಶ್ರೀರಂಗಪಟ್ಟಣ, ಕೆಆರ್ಎಸ್ಮೂಲಕ ಮೈಸೂರಿಗೆ ತೆರಳಲಿದ್ದು, ಮೈಸೂರಿನಲ್ಲಿ ಪ್ರತಿಭಟನಾ ಸಭೆ ನಡೆಸಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

