ವಿದ್ಯಾರ್ಥಿಗಳಿಗೆ ಸಂಸ್ಕಾರ ಅಗತ್ಯ: ಗೋಪಾಲಗೌಡ
ಸೂಲಿಬೆಲೆ: ಸದೃಢ ದೇಶ ಕಟ್ಟುವಂತ ಜವಾಬ್ದಾರಿ ಯುವಕರ ಮೇಲಿದ್ದು, ಈಗಿನ ಯುವಕರಿಗೆ ಸಂಸ್ಕಾರದ ಶಿಕ್ಷಣ ನೀಡುವುದು ಅಗತ್ಯ ಎಂದು ರಾಜ್ಯ ಪೋಟಾಷಿಂ ಇಂಡಿಯಾ ಲಿ. ನಿರ್ದೇಶಕ ಬಿ.ಎನ್. ಗೋಪಾಲಗೌಡ ಹೇಳಿದ್ದಾರೆ.
ಸೂಲಿಬೆಲೆಯಲ್ಲಿ ನಡೆದ ಪಿಯು ಕಾಲೇಜು ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ಹೋರಾಟ ಚೈತನ್ಯ ಕುಂಠಿತವಾಗುತ್ತಿದೆ. ಈ ದೇಶ ಮತ್ತು ಸಮಾಜವನ್ನು ಉತ್ತಮ ಮಾರ್ಗದಲ್ಲಿ ನಡೆಸಿಕೊಂಡು ಹೋಗಬೇಕಾದ ಜವಾಬ್ದಾರಿ ಯುವಕರ ಮೇಲಿದೆ. ಪ್ರತಿಯೊಬ್ಬರ ಜೀವನದಲ್ಲಿ ಯಶಸ್ವಿ ಎನ್ನುವುದು ಸುಲಭವಾಗಿ ಸಿಗೋಲ್ಲ. ಇದಕ್ಕಾಗಿ ಕಠಿಣ ಪರಿಶ್ರಮ ಅಗತ್ಯ ಎಂದರು.
ಮುಖ್ಯ ಅತಿಥಿಯಾಗಿದ್ದ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ಯುವಕರು ಆದರ್ಶ ಮತ್ತು ಉತ್ತಮ ನಡೆತೆಯನ್ನು ರೂಪಿಸಿಕೊಳ್ಳಲು ವಿವೇಕಾನಂದರ ಜೀವನ ಚರಿತ್ರೆ ಅಭ್ಯಸಿಸಬೇಕು. ಈ ದೇಶ ಕಟ್ಟುವ ಶಕ್ತಿ ಯುವಕರಿಗಿದೆ. ಶಿಕ್ಷಣ ಎಂಬುದು ಮನುಷ್ಯನ ಬದಲಾವಣಿಗೆ ಇರುವ ದಾರಿ. ಇದರಲ್ಲಿ ಪ್ರತಿಯೊಬ್ಬರು ಯಶಸ್ವಿಯಾಗಬೇಕು. ಗುರಿ ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟವಾಗಬೇಕು ಎಂದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೂ.ರಂ. ರಾಮಯ್ಯ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯೆ ಇಕ್ಬಾಲ್ ಇನ್ನಿಸಾ, ಗ್ರಾಪಂ ಅಧ್ಯಕ್ಷ ನಾರಾಯಣಪ್ಪ ಮಾತನಾಡಿದರು. ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು .ಅತಿಥಿ ಉಪನ್ಯಾಸಕರನ್ನು ಸನ್ಮಾನಿಸಲಾಯಿತು. ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಣಿ ಮಾಡಲಾಯಿತು.
ಗ್ರಾಪಂ ಮಾಜಿ ಅಧ್ಯಕ್ಷ ಟಿ.ಸಿ. ವೆಂಕಟೇಗೌಡ, ಆರ್. ಮುನಿರಾಜ್, ತಾಪಂ ಸದಸ್ಯೆ ಮಂಜುಳಾ ಡಿಟಿ ವೆಂಕಟೇಶ್, ಕೆ.ಹನುಮಂತರಾಯಪ್ಪ, ಗಂಗಾಂಬಿಕೆ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

