ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ
ದೊಡ್ಡಬಳ್ಳಾಪುರ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ತಾಲೂಕು ಜಾಲ ಹೋಬಳಿ ಬಂಡಿಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಎಸ್.ವಿ. ವೆಂಕಟರಂಗನ್ ಅವರ ಮನೆ ಮತ್ತು ಕಚೇರಿಗಳ ಮೇಲೆ ಗುರುವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಅಧಿಕಾರಿ ಅಶ್ವಿನಿ ನೇತೃತ್ವದಲ್ಲಿ ದೊಡ್ಡಬಳ್ಳಾಪುರದ ಸುಭಾಷ್ನಗರ ಹಾಗೂ ತಾಲೂಕಿನ ತೂಬಗೆರೆ, ಸೊಣ್ಣೇನಹಳ್ಳಿಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಯಿತು. ಬಂಡಿಕೊಡಿಗೇಹಳ್ಳಿ ಗ್ರಾಪಂ ಕಾರ್ಯಾಲಯದ ಮೇಲೆ ಸಹ ದಾಳಿ ನಡೆದಿದೆ.
3 ವರ್ಷಗಳಿಂದ ಅವರು ಬಂಡಿಕೊಡಿಗೇಹಳ್ಳಿ ಗ್ರಾಪಂ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರು ಅಕ್ರಮವಾಗಿ ಹಣಗಳಿಕೆ ಮಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಬೆಳಗ್ಗೆ ದಾಳಿ ನಡೆದ ಸಂದರ್ಭದಲ್ಲಿ ಸೊಣ್ಣೇನಹಳ್ಳಿ ಮತ್ತು ದೊಡ್ಡಬಳ್ಳಾಪುರದ ಮನೆಯಲ್ಲಿ ಹಲವು ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಲಾಗಿದೆ. ಕೆಲ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

