ಬೆಂಗಳೂರು ಗ್ರಾಮಾಂತರ

'ಕಾವೇರಿ ಐತೀರ್ಪು ಪ್ರಕಟಿಸಿದರೆ ಉಗ್ರ ಹೋರಾಟ'

Published On :

ಚನ್ನಪಟ್ಟಣ:  ರಾಜ್ಯವನ್ನು ಪ್ರತಿನಿಧಿಸಿರುವ ಕೇಂದ್ರ ಸಚಿವರು ಅಧಿಕಾರ ಲಾಲಸೆಯಿಂದ ನಾಡಿನ ಹಿತಕಡೆಗಣಿಸಿದ್ದಾರೆ. ಇದರಿಂದಾಗಿ ಕಾವೇರಿ ಐತೀರ್ಪಿನ ಅಧಿಸೂಚನೆ ಹೊರ ಬೀಳುವಂತಾಗಿದೆ ಎಂದು ಜನಪರ ವೇದಿಕೆ ಅಧ್ಯಕ್ಷ ರಮೇಶ್ಗೌಡ ಆಕ್ರೋಶ ವ್ಯಕ್ತಪಡಿಸಿದರು. ವೇದಿಕೆ ಕಾವೇರಿ ಐತೀರ್ಪಿನ ವಿರುದ್ಧ ಹಮ್ಮಿಕೊಂಡಿದ್ದ ಜನಾಂದೋಲನ ಉದ್ದೇಶಿಸಿ ಮಾತನಾಡಿದ ಅವರು, ತಮಿಳುನಾಡಿನ ಬಾಲಬಡುಕತನಕ್ಕೆ ಕೇಂದ್ರ ಮರುಳಾಗಿದೆ.  ನಮ್ಮ ರಾಜ್ಯದ ಕೇಂದ್ರ ಮಂತ್ರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆರೋಪಿಸಿದರು. ಜನಾಂದೋಲನದಲ್ಲಿ ಅಧ್ಯಕ್ಷೆ ಮಂಗಳಮ್ಮ, ಉಪಾಧ್ಯಕ್ಷ ಸಿ.ಕೆ.ಎಂ. ಗೌಡ, ಯುವ ಘಟಕದ ಅಧ್ಯಕ್ಷ ನಿಲೇಶ್ ಗೌಡ, ಸಂಘಟನಾ ಕಾರ್ಯದರ್ಶಿ ದಿನೇಶ್, ಮಲ್ಲೇಶ್, ವಳಗೆರೆ ದೊಡ್ಡಿ ಶಂಕರ್, ಲಕ್ಷ್ಮಮ್ಮ ಮುಂತಾದವರು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.