ಬೆಂಗಳೂರು ಗ್ರಾಮಾಂತರ

'ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳ ಬೀಜ ಬಿತ್ತಿ'

Published On :

ದೇವನಹಳ್ಳಿ:  ಇಲ್ಲಿನ ನಗರೇಶ್ವರಕಲ್ಯಾಣ ಮಂದಿರದಲ್ಲಿ ದೇವನಹಳ್ಳಿ ಗ್ರಾಮೀಣ ವಿದ್ಯಾಭಿವೃದ್ಧಿ ಸಂಸ್ಥೆ, ರಾಜ್ಯ ಮಹಿಳಾ ಆಯೋಗ ಹಾಗೂ ಮಹಿಳಾ ಮತ್ತು ುಕ್ಕಳ ಕಲ್ಯಾಣ ಇಲಾಖೆ ಮತ್ತು ಸಾಂತ್ವನ ಮಹಿಳಾ ಸಹಾಯವಾಣಿ ಆಶ್ರಯದಲ್ಲಿ ಶುಕ್ರವಾರ ಶಾಲಾ ವಿದ್ಯಾರ್ಥಿಗಳಿಗೆ 'ಮಹಿಳಾ ಶೋಷಣೆ' ವಿಷಯದ ಬಗ್ಗೆ ಕಾನೂನು ಅರಿವು ಜಾಗೃತಿ ಶಿಬಿರ ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಬೆಂಗಳೂರಿನ ವಕೀಲೆ ರಮಾದೇವಿ ಮಾತನಾಡಿ, ಸಮಾಜದಲ್ಲಿ ಹೆಣ್ಣು -ಗಂಡು ಸೌಲಭ್ಯ, ಸ್ಥಾನಮಾನ ಪಡೆಯುವಲ್ಲಿ ಸಮಾನ ಅರ್ಹರು. ಸಂವಿಧಾನ ಪ್ರಕಾರ ಎಲ್ಲರೂ ಗೌರವಯುತವಾಗಿ ಬಾಳುವ ಹಕ್ಕಿದೆ. ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯಗಳ ಬೀಜ ಬಿತ್ತಿ, ಶೈಕ್ಷಣಿಕ ಚಟುವಟಿಕೆಗೆಗೆ ಪ್ರೋತ್ಸಾಹಿಸಬೇಕು ಎಂದರು.
ಮುಖ್ಯ ಅತಿಥಿಗಳಾಗಿ ನಳಂದ ಪ್ರೌಢಶಾಲೆ ಪ್ರಾಂಶುಪಾಲ ಬಿ.ಎನ್.ಕೃಷ್ಣಪ್ಪ ಮಾತನಾಡಿದರು. ವಿದ್ಯಾರ್ಥಿನಿಯರು ಅಥವಾ ಮಹಿಳೆಯರಿಗೆ ಯಾವುದೇ ರೀತಿಯ ತೊಂದರೆ ಸಂಭವಿಸಿದಲ್ಲಿ ದೇವನಹಳ್ಳಿಯ ಸಾಂತ್ವಾನ ಮಹಿಳಾ ಸಹಾಯವಾಣಿಗೆ (9845106746) ಸಂಪರ್ಕಿಸಬೇಕೆಂದು ಮುಖ್ಯಸ್ಥರಾದ ಸೂರ್ಯಕಲಾ ಮೂರ್ತಿರವರು ತಿಳಿಸಿದರು. ಸಲಹಾ ಸಮಿತಿ ಅಧ್ಯಕ್ಷ ಡಾ. ಎನ್.ನರಸಿಂಹಮೂರ್ತಿ ಸ್ವಾಗತ ಕೋರಿದರು. ನಳಂದ ಕಾಲೇಜು ಪ್ರಾಂಶುಪಾಲ ಡಿ.ಸಿ.ವೆಂಕಟೇಶಗೌಡ, ಶ್ರೀಕೃಷ್ಣ ಐಟಿಐ ಪ್ರಾಂಶುಪಾಲರಾದ ಮುರಾರಿ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.