ಅಫ್ಜಲ್ಗುರುಗೆ ನೇಣು: ಸಂಘಟನೆಗಳ ಸ್ವಾಗತ
ದೊಡ್ಡಬಳ್ಳಾಪುರ: ಭಾರತ ಸಂಸತ್ ಭವನದ ಮೇಲೆ ಭಯೋತ್ಪಾದಕ ದಾಳಿ ನಡೆಸಿದ್ದ ಉಗ್ರ ಅಫ್ಜಲ್ಗುರುಗೆ ಗಲ್ಲುಶಿಕ್ಷೆ ವಿಧಿಸಿರುವುದು ಸಂತಸ ತಂದಿದೆ. ದೇಶದಲ್ಲಿ ಶಾಂತಿ ಕದಡುವ ಮತ್ತು ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವವರಿಗೆ ಇದರಿಂದ ಸ್ಪಷ್ಟ ಸಂದೇಶ ರವಾನೆಯಾಗಿದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಹೇಳಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಬೆಂ.ಗ್ರಾ.ಜಿಲ್ಲಾ ಎಬಿವಿಪಿ, 12 ವರ್ಷಗಳಿಂದ ಜೈಲಿನಲ್ಲಿದ್ದ ಅಫ್ಜಲ್ನನ್ನು ಇಂದು ತಿಹಾರ್ ಜೈಲಿನಲ್ಲಿ ಗಲ್ಲಿಗೇರಿಸಿರುವುದು ಸ್ವಾಗತಾರ್ಹ. ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸುವವರು, ಭಯೋತ್ಪಾದಕ ಕೃತ್ಯ ನಡೆಸುವವರಿಗೆ ಇದು ತಕ್ಕ ಉತ್ತರ. ಇದರಿಂದ 121 ಕೋಟಿ ಭಾರತೀಯರಿಗೆ ಸಂತೋಷವಾಗಿದೆ. ಅಫ್ಜಲ್ ಸೇರಿದಂತೆ ಹಲವು ಮಂದಿ ಉಗ್ರರನ್ನು ಗಲ್ಲಿಗೇರಿಸಬೇಕು ಎಂದು ಆಗ್ರಹಿಸಿ ಎಬಿವಿಪಿ ಹಲವು ಹೋರಾಟಗಳನ್ನು ರೂಪಿಸಿತ್ತು. ದೇಶದ ಆಂತರಿಕ ಮತ್ತು ಬಾಹ್ಯ ಸುರಕ್ಷತೆಗೆ ಧಕ್ಕೆ ತರುವ ಭಯೋತ್ಪಾದನಾ ಕೃತ್ಯಗಳನ್ನು ನಿಗ್ರಹಿಸುವಲ್ಲಿ ಕೇಂದ್ರ ಸರ್ಕಾರ ಕಠಿಣ ಕಾನೂನು ರೂಪಿಸಬೇಕು ಎಂದು ಎಬಿವಿಪಿ ಜಿಲ್ಲಾ ಸಂಚಾಲಕ ಸಂತೋಷ್, ನವೀನ್, ಅಮರ್ ಮತ್ತಿತರರು ಆಗ್ರಹಿಸಿದ್ದಾರೆ.
ಸ್ವಾಗತಾಹ: ಅಫ್ಜಲ್ಗುರುಗೆ ನೇಣುಶಿಕ್ಷೆ ವಿಧಿಸಿರುವ ಕ್ರಮವನ್ನು ಇಲ್ಲಿನ ಆರ್ಎಸ್ಎಸ್, ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ, ವಿವಿಧ ಕನ್ನಡಪರ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು ಸೇರಿದಂತೆ ಅನೇಕ ಸಂಘಟನೆಗಳು ಸ್ವಾಗತಿಸಿವೆ. ತಡವಾಗಿಯಾದರೂ ಸರ್ಕಾರ ತಕ್ಕ ಕ್ರಮ ಕೈಗೊಂಡಿದೆ ಎಂದು ಸಂಘಟನೆಗಳ ಮುಖಂಡರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

