ಬೆಂಗಳೂರು ಗ್ರಾಮಾಂತರ

ಚನ್ನರಾಯಪಟ್ಟಣ ಗ್ರಾಪಂ ಅಧ್ಯಕ್ಷೆ ಪೂಜಮ್ಮ

Published On :

ವಿಜಯಪುರ: ಇಲ್ಲಿಗೆ ಸಮೀಪದ ಚನ್ನರಾಯಪಟ್ಟಣ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.
ಇದರಲ್ಲಿ ಅಧ್ಯಕ್ಷರಾಗಿ ಪೂಜಮ್ಮ ಮತ್ತು ಉಪಾಧ್ಯಕ್ಷರಾಗಿ ಕೆಂಪಮ್ಮ
ಆಯ್ಕೆಯಾದರು. ಅಧ್ಯಕ್ಷ ಸ್ಥಾನಕ್ಕೆ ಪೂಜಮ್ಮ ಮತ್ತು ನಾಗರತ್ನಮ್ಮ ಸ್ಪರ್ಧಿಸಿದ್ದರು. ನಾಗರತ್ನಮ್ಮ 9 ಮತಗಳನ್ನು ಪಡೆದರೆ ಪೂಜಮ್ಮ 14 ಮತಗಳನ್ನುಗಳಿಸಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಕೆಂಪಮ್ಮ ಮತ್ತು ಶಿವಕುಮಾರ್ ಸ್ಪರ್ಧಿಸಿದ್ದರು. ಶಿವಕುಮಾರ್ 9 ಮತಗಳನ್ನು ಮತ್ತು ಕೆಂಪಮ್ಮ14 ಮತಗಳನ್ನು ಗಳಿಸಿ ಉಪಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದರು.
 ಪಂಚಾಯಿತಿಯಲ್ಲಿ ಒಟ್ಟು 23 ಸದಸ್ಯರಿದ್ದು 9 ಕಾಂಗ್ರೆಸ್ ಸದಸ್ಯರು, 5 ಬಿಜೆಪಿ ಸದಸ್ಯರು ಮತ್ತು 9ಮಂದಿ ಜೆಡಿಎಸ್ ಸದಸ್ಯರಿದ್ದಾರೆ.ಅಧ್ಯಕ್ಷ ಸ್ಥಾನವು ಎಸ್ಸಿ ಮಹಿಳೆ ಮತ್ತು ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ಮೀಸಲಾಗಿತ್ತು. ಚುನಾವಣಾಧಿಕಾರಿಯಾಗಿ
ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ವಿನೋದಮ್ಮ ಕಾರ್ಯನಿರ್ವಹಿಸಿದರು.
ಪಂಚಾಯಿತಿ ಕಾರ್ಯದರ್ಶಿತಿಮ್ಮೇಗೌಡ ಮತ್ತು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವೆಂಕಟೇಶಯ್ಯ ಚುನಾವಣಾ ಪ್ರಕ್ರಿಯೆಯಲ್ಲಿ ಸಹಕರಿಸಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಮುಖಂಡ ಎಂ.ನಾರಾಯಣ ಗೌಡ, ಬಯಪ ಉಪಾಧ್ಯಕ್ಷ ನಾಗೇಶ್, ಭೂನ್ಯಾಯ ಮಂಡಳಿ ಸದಸ್ಯ ಡಿ.ಆರ್. ನಾರಾಯಣಸ್ವಾಮಿ, ಎಸ್.ಜಿ.ನಾರಾಯಣಸ್ವಾಮಿ, ಜಿ.ಪಂ.ಸದಸ್ಯ ಬಿ.ರಾಜಣ್ಣ, ಬಿಜೆಪಿ ತಾಲೂಕು ಕಾರ್ಯದರ್ಶಿ ದೇ.ಸು.ನಾಗರಾಜ್, ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಗುರುಸ್ವಾಮಿ, ಬಿಜೆಪಿ ಜಿಲ್ಲಾ ಎಸ್ಸಿ ಘಟಕದ ಅಧ್ಯಕ್ಷ ಗುರಪ್ಪ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ತಮ್ಮೇಗೌಡ, ಖಾದಿ ಬೋಡ್ ರ್ ಮಾಜಿ ಅಧ್ಯಕ್ಷ ಪಿ.ಮಾರೇಗೌಡ, ವಿಜಯಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮೀನಾರಾಯಣಪ್ಪ, ವಿಜಯಪುರ ಹೋಬಳಿ ಎಸ್ಸಿ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ಚನ್ನರಾಯಪಟ್ಟಣ ಹೋಬಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.