ಬಡತನ ನಿವಾರಣೆಗೆ ಶಿಕ್ಷಣವೊಂದೇ ಪರಿಹಾರ
ವಿಜಯಪುರ: ರಾಜ್ಯದಲ್ಲಿ ಒಟ್ಟು 1.5ಕೋಟಿ ಜನಸಂಖ್ಯೆ ಕಡು ಬಡತನದಿಂದ ಜೀವನ ಸಾಗಿಸುತ್ತಿದ್ದಾರೆ. ಇವರ ಅಭಿವೃದ್ಧಿಗೆ ಮತ್ತು ಬಡತನ ನಿವಾರಣೆಗೆ ಶಿಕ್ಷಣವೊಂದೇ ಪರಿಹಾರ ಎಂದು ಶಾಸಕ ವೆಂಕಟಸ್ವಾಮಿ ತಿಳಿಸಿದರು.
ಅವರು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಕಾಲೇಜು ವಾರ್ಷಿಕೋ
ತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ತಾಲೂಕಿನಲ್ಲಿ ಮುಂಬರುವ ವರ್ಷದಲ್ಲಿ 84 ಕೈಗಾರಿಕೆಗಳು ಸ್ಥಾಪನೆಯಾಗಲಿದ್ದು, 2 ಲಕ್ಷ ಜನಕ್ಕೆ ಉದ್ಯೋಗ ಅವಕಾಶ ದೊರೆಯಲಿದೆ. ಇದಕ್ಕಾಗಿ ತಾಲೂಕಿನಲ್ಲಿ 28 ಸಾವಿರ ಎಕರೆ ಜಾಗವನ್ನು ಮೀಸಲು ಇರಿಸಲಾಗಿದೆ. ಇದರಿಂದ ತಾಲೂಕಿನ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದರು. ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಬಚ್ಚೇಗೌಡ ಮಾತನಾಡಿ ಇಂದಿನ ದಿನಗಳಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಅವಶ್ಯವಿರುವುದು ಮುಕ್ತ ವಾತಾವರಣ ಮತ್ತು ಸರಿಯಾದ ಮಾರ್ಗದರ್ಶನ. ಭವಿಷ್ಯದ ಕನಸುಗಳನ್ನು ನನಸಾಗಿಸಿಕೊಳ್ಳಲು ವಿದ್ಯಾರ್ಥಿಗಳು ತಮಗಿರುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.
ದೇವನಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ. ಜಗನ್ನಾಥ್ ಮಾತನಾಡಿ ಹದಿಹರೆಯದ ಮಕ್ಕಳ ಮನಸ್ಸು
ಸೂಕ್ಷ್ಮ ಮನಸ್ಥಿತಿಯಲ್ಲಿರುತ್ತದೆ. ಮಕ್ಕಳು ತಮ್ಮ ಮಾನಸಿಕ ಸ್ಥಿತಿಯನ್ನು ಕುಗ್ಗಿಸಿಕೊಳ್ಳದೆ ಆತ್ಮಸ್ಥೈರ್ಯವನ್ನು ಬೆಳೆಸಿಕೊಂಡು ಬದುಕನ್ನು ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಮುನಿಶ್ಯಾಮಗೌಡ ಮತ್ತು ಪುರಸಬಾ ಸದಸ್ಯ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿಯ ಖಜಾಂಜಿ ಎಂ. ಸತೀಶ್ ಕುಮಾರ್ ಮಾತನಾಡಿದರು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾದ ಮಕ್ಕಳಿಗೆ ಮತ್ತು ಪ್ರಥಮ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಬೆಂ.ಗ್ರಾ.ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನರಸಿಂಹನಾಯಕ್, ದೇವನಹಳ್ಳಿ ಪುರಸಭಾ ಸದಸ್ಯ ಸೋಮಣ್ಣ, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರಾದ ಬೈರಾಪುರ ರಾಜಣ್ಣ, ಸೊಣ್ಣೇಗೌಡ, ಕಾಲೇಜು ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

