ವಿಪ್ ಉಲ್ಲಂಘನೆ ಪ್ರಕರಣದ ವಿಚಾರಣೆ
ಚನ್ನಪಟ್ಟಣ: ನಗರಸಭೆ ಅವಿಶ್ವಾಸ ನಿರ್ಣಯದ ವೇಳೆ ಪಕ್ಷದ ವಿಪ್ ಜಾರಿಯಾಗಿದ್ದರೂ ಹಾಲಿ ಅಧ್ಯಕ್ಷರ ಪರ ವಿಶ್ವಾಸ ತೋರಿದ ಸದಸ್ಯರ ವಿರುದ್ಧ ಜೆಡಿಎಸ್ ಮತ್ತು ಕಾಂಗ್ರೆಸ್ ಸಲ್ಲಿಸಿದ್ದ ವಿಪ್ ಉಲ್ಲಂಘನೆ ಪ್ರಕರಣದ ವಿಚಾರಣೆ ಮಂಗಳವಾರ ಜಿಲ್ಲಾಧಿಕಾರಿಗಳ ನ್ಯಾಯಾಲಯದಲ್ಲಿ ನಡೆಯಿತು.
ಜೆಡಿಎಸ್ನ ಸಾಕ್ಷ್ಯಗಳ ಸವಾಲು ಮತ್ತು ಪಾಟಿ ಸವಾಲು ನಡೆದಿದ್ದು ಜೆಡಿಎಸ್ನ ಎಲ್ಲಾ ಸಾಕ್ಷ್ಯಗಳ ವಿಚಾರಣೆ ಪೂರ್ಣಗೊಂಡಿದ್ದು ಕಾಂಗ್ರೆಸ್ ಸಾಕ್ಷ್ಯಗಳ ವಿಚಾರಣೆಯನ್ನು ಆರಂಭಿಸಲಾಯಿತು. ಈ ಪ್ರಕರಣದಲ್ಲಿ ಜೆಡಿಎಸ್ನಿಂದ ಗುರುತಿಸಲಾಗಿದ್ದ ನಗರಸಭಾ ಸದಸ್ಯ ವಾಸಿಲ್ ಆಲಿಖಾನ್, ತಾಲೂಕು ಜೆಡಿಎಸ್ ಅಧ್ಯಕ್ಷ ವಡ್ಡರಹಳ್ಳಿ ರಾಜಣ್ಣ,ನಗರ ಜೆಡಿಎಸ್ ಅಧ್ಯಕ್ಷ ಸತ್ಯನಾರಾಯಣ, ಅವಿಶ್ವಾಸ ಗೊತ್ತುವಳಿಯ ದಿನ ಹಾಜರಿದ್ದ ಛಾಯಾಚಿತ್ರಗ್ರಾಹಕರ ವಿಚಾರಣೆ ಮುಗಿದಿದ್ದು, ನಾಲ್ವರು ಜೆಡಿಎಸ್ ಸಾಕ್ಷಿಗಳ ವಿಚಾರಣೆ ಮುಕ್ತಾಯವಾಗಿದ್ದು, ಕಾಂಗ್ರೆಸ್ ಸಾಕ್ಷಿಗಳ ವಿಚಾರಣೆ ಆರಂಭವಾಗಿದೆ. ಕಾಂಗ್ರೆಸ್ನಿಂದ ಆಯ್ಕೆಯಾಗಿರುವ ನಗರಸಭಾ ಸದಸ್ಯ ಭಗವಾನ್ ಅವರ ವಿಚಾರಣೆ ನಡೆಸಿದ ಜಿಲ್ಲಾಧಿಕಾರಿಗಳ ನ್ಯಾಯಾಲಯ ವಿಚಾರಣೆಯನ್ನು ಫೆ.21ಕ್ಕೆ ಮುಂದೂಡಿದರು. ಹಾಲಿ ನಗರಸಭೆ ಅಧ್ಯಕ್ಷೆ ರೇಷ್ಮಾಬಾನು, ಸೈಯದ್ ಅಜ್ಗರ್ ಆಲಿ, ಮಹಮ್ಮದ್ ಅಸ್ಲಂ, ಲಕ್ಷ್ಮಮ್ಮ ವಿಫ್ ಉಲ್ಲಂಘನೆ ಪ್ರಕರಣ ಎದುರಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

