ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ ಭವಿಷ್ಯ ರೂಪಿಸಿಕೊಳ್ಳಲಿ
ಮಾಗಡಿ: ವಿದ್ಯಾರ್ಥಿಗಳು ಉತ್ತಮವಾಗಿ ಅಧ್ಯಯನ ಮಾಡಿ ಭವಿಷ್ಯ ರೂಪಿಸಿಕೊಳ್ಳುವಂತೆ ಆದಿಚುಂಚನಗಿರಿ ಬೆಂಗಳೂರು ವಿಜಯನಗರ ಶಾಖಾ ಮಠದ ಸೌಮ್ಯನಾಥಸ್ವಾಮೀಜಿ ಕರೆ ನೀಡಿದರು.
ಅವರು ಮಾಗಡಿ ಪಟ್ಟಣದಲ್ಲಿರುವ ಶ್ರೀರಂಗನಾಥಸ್ವಾಮಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಗುರುಗಳು ಅನುಭವದ ಜ್ಞಾನವನ್ನು ಧಾರೆ ಎರೆಯುತ್ತಾರೆ ಎಂದರು. ನಿವೃತ್ತ ಮುಖ್ಯಶಿಕ್ಷಕಿ ಬಿಸಜಾಕ್ಷಮ್ಮ ಸನ್ಮಾನ ಸ್ವೀಕರಿಸಿ ಮಾತನಾಡಿದರು. ಬಿ.ಎಸ್.ನಂದಿನಿ ಶಾಲಾ ವಾರ್ಷಿಕ ವರದಿ ಮಂಡಿಸಿದರು. ಇದೇ ವೇಳೆ ಹೆಚ್ಚು ಅಂಕಗಳಿಸಿದ ಹಾಗೂ ಸಾಂಸ್ಕೃತಿಕ , ಕ್ರೀಡೆ, ಇತರೆ ಕಾರ್ಯಕ್ರಮಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಡಳಿತಾಧಿಕಾರಿ ಶಿವೇಗೌಡ, ದಿ.ಬಾಲಗಂಗಾಧರನಾಥಸ್ವಾಮೀಜಿಗಳು ಶಿಕ್ಷಣ ಕ್ರಾಂತಿ ಮಾಡಿದ್ದಾರೆ. ಅವರ ಸಾಧನೆಯನ್ನು ವಿದ್ಯಾರ್ಥಿಗಳು ಸಾರ್ಥಕತೆಗೊಳಿಸಿಕೊಳ್ಳಬೇಕು ಎಂದರು. ಅಕ್ಷರದಾಸೋಹ ಸಹಾಯಕ ನಿರ್ದೇಶಕ ರಂಗಸ್ವಾಮಿ ಮಾತನಾಡಿದರು. ಬಿಜಿಎಸ್ ಕಾಲೇಜು ಪ್ರಾಂಶುಪಾಲ ಕೆ. ಉಮೇಶ್, ಮುಖ್ಯಶಿಕ್ಷಕ ಸಿ.ರಂಗಪ್ಪ, ವೈ.ಎಲ್.ರಾಮಣ್ಣ, ಎಚ್.ಎಸ್. ವೆಂಕಟೇಶ್ ಮೂರ್ತಿ, ಜಯಸಿಂಹ, ಬಗಿನಗೆರೆ ಶಾಲೆಯ ಮುಖ್ಯಶಿಕ್ಷಕ ಎನ್.ಲಕ್ಷ್ಮಯ್ಯ, ಸತೀಶ್ ಇತರರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

