ಬೆಂಗಳೂರು ಗ್ರಾಮಾಂತರ

ಭೂಗಳ್ಳ ಸರ್ಕಾರಗಳ ಬಗ್ಗೆ ಎಚ್ಚರಇರಲಿ: ಕಡಿದಾಳ್ ಶಾಮಣ್ಣ ಕರೆ

Published On :

ದೊಡ್ಡಬಳ್ಳಾಪುರ:  ಭೂಗಳ್ಳ ಸರ್ಕಾರಗಳ ಬಗ್ಗೆ ಸದಾ ಎಚ್ಚರದಿಂದಿರಬೇಕು. ರೈತರ ಜಮೀನು ಕಿತ್ತು ಬಂಡವಾಳಶಾಹಿಗಳಿಗೆ ರತ್ನಗಂಬಳಿ ಹಾಸುತ್ತಿರುವ ರಾಜಕಾರಣಿಗಳೇ ಈ ದೇಶದ ಆತಂಕ. ಇಲ್ಲಿ ವೈಯಕ್ತಿಕ ಲಾಭದ ಪ್ರಶ್ನೆ ಮುಖ್ಯವಾಗಿದೆಯೇ ಹೊರತು ಬದುಕಿನ ಪ್ರಶ್ನೆ ಮುಖ್ಯವಾಗಿಲ್ಲ ಎಂದು ಹಿರಿಯ ಹೋರಾಟಗಾರ ಕಡಿದಾಳ್ ಶಾಮಣ್ಣ ಹೇಳಿದರು.
ಇಲ್ಲಿನ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅವರ 77ನೇ ಹುಟ್ಟುಹಬ್ಬದ ಅಂಗವಾಗಿ ನಡೆದ ವಿಶ್ವ ರೈತ ಸ್ವಾಭಿಮಾನಿ ದಿನ ಕಾರ್ಯಕ್ರಮ, ಬೆಂ.ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲಾ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾರ್ಯಕ್ರಮ ಉದ್ಘಾಟಿಸಿದ ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ರಾಜ್ಯದ ನೀರಿನ ಲಭ್ಯತೆ ಆಧಾರದಲ್ಲಿ ತಮಿಳುನಾಡು ಶೇ.38ರಷ್ಟು ನೀರಾವರಿ ಮಾಡಿಕೊಂಡರೆ, ಆಂಧ್ರ ಶೇ.46ರಷ್ಟನ್ನು ಬಳಸಿಕೊಳ್ಳುತ್ತದೆ. ಆದರೆ, ನಾವು ಬಳಕೆ ಮಾಡಿಕೊಳ್ಳುತ್ತಿರುವುದು ಶೇ.26ರಷ್ಟನ್ನು ಮಾತ್ರ ಎಂದರು. ಜಿಲ್ಲಾ ರೈತ ಸಂಘದ ಮುಖಂಡ ಡಾ.ಸಿ.ಎಸ್.ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಅಧ್ಯಕ್ಷ ಎನ್.ಆರ್. ಪ್ರಸನ್ನ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜ್ಯ ಕಾರ್ಯಾಧ್ಯಕ್ಷ ಬಸವರಾಜಪ್ಪ, ಕಾರ್ಯದರ್ಶಿ ಸಿದ್ಧವೀರಪ್ಪ, ಮಂಜುನಾಥಗೌಡ, ಉಪಾಧ್ಯಕ್ಷ ಚಿಕ್ಕಸ್ವಾಮಿ, ಬೆಂ.ಗ್ರಾ. ಜಿಲ್ಲಾಧ್ಯಕ್ಷ ವೆಂಕಟನಾರಾಯಣಪ್ಪ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.