ಬೆಂಗಳೂರು ಗ್ರಾಮಾಂತರ

ಪತ್ರಿಕೆಗಳಿಂದ ಸಮಾಜದ ಶುದ್ಧೀಕರಣ: ಬಚ್ಚೇಗೌಡ

Published On :

ಹೊಸಕೋಟೆ: ಪತ್ರಿಕೆಗಳು ನೈಜ ಸುದ್ದಿಗೆ ಒತ್ತು ನೀಡಬೇಕು, ಸುದ್ದಿಗಳ ವೈಭವೀಕರಣ ಸಲ್ಲದು ಎಂದು ಕಾರ್ಮಿಕ ಸಚಿವ ಬಿ.ಎನ್.ಬಚ್ಚೇಗೌಡ ಹೇಳಿದರು.
ಅವರು ಇಲ್ಲಿನ ಸುಜಾತ ರವೀಂದ್ರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಗ್ರಾಮಾಂತರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು. ರಾಜಕೀಯ ಕ್ಷೇತ್ರದಲ್ಲಿರುವಂತೆ ಪತ್ರಿಕಾರಂಗದಲ್ಲೂ ಗೊಂದಲಗಳಿವೆ, ಸಮಾಜ ಪರಿವರ್ತನೆ ಕಾರ್ಯದಲ್ಲಿ ಪತ್ರಿಕೆಗಳ ಪಾತ್ರ ಹಿರಿದು ಎಂದು ಹೇಳಿದರು.
ಜಿಲ್ಲಾ ಸಂಘಗಳಿಗೆ ಸರ್ಕಾರ ಸ್ವಂತ ಕಟ್ಟಡ ನಿರ್ಮಾಣಕ್ಕೆ 25 ಲಕ್ಷ ರು.ಸಹಾಯಧನ ನೀಡುತ್ತಿದೆ. ಆದಾಗ್ಯೂ ಬಹಳಷ್ಟು ಸಂಘಗಳು ಸ್ವಂತ ನಿವೇಶನ ಹೊಂದಿಲ್ಲದಿರುವುದರಿಂದ ಸ್ಥಳೀಯ ಸಂಸ್ಥೆಗಳ ಮೂಲಕ ಪಡೆದುಕೊಳ್ಳಲು ಶಿಫಾರಸು ಮಾಡಲಾಗುವುದು. ತಾಲೂಕು ಸಂಘಗಳಿಗೂ ಸಹ ಸೂಕ್ತ ಸ್ಥಳಾವಕಾಶ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯಡಿ ವೈದ್ಯಕೀಯ ಸೌಲಭ್ಯಗಳನ್ನು ಪತ್ರಕರ್ತರಿಗೂ ಸಹ ವಿಸ್ತರಿಸಲಾಗಿದೆ ಎಂದು ತಿಳಿಸಿದರು.
ಸಣ್ಣ ಪತ್ರಿಕೆಗಳು ತೀವ್ರ ಸಂಕಷ್ಪ ಎದುರಿಸುತ್ತಿವೆ. ಅನೇಕ ಪತ್ರಿಕೆಗಳು ಆರ್ಥಿಕ ನಷ್ಟ ಭರಿಸಲಾಗದೆ ತನ್ನ ಕಾರ್ಯವನ್ನು ಸ್ಥಗಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದಿಂದ ಸಣ್ಣ ಪತ್ರಿಕೆಗಳಿಗೆ ಸಹಾಯಧನ ನೀಡಲಾಗುತ್ತಿದ್ದು, ಪತ್ರಿಕೆಗಳ ಬೆಳವಣಿಗೆಗೆ ಸರ್ಕಾರ ಬದ್ಧವಿದೆ ಎಂದರು.
ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು ಮತ್ತು ಇತ್ತೀಚಿಗೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ಪತ್ರಕರ್ತ ಮುನಿಗಂಗಯ್ಯಗೆ ಸಂಘದಿಂದ ಸಹಾಯಧನ ನೀಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ ಗಂಗಾಧರ್ ಮೊದಲಿಯಾರ್ ಹಾಗೂ ಮಂಡಿಬೆಲೆ ರಾಜಣ್ಣ, ಸಂಘದ ಜಿಲ್ಲಾಧ್ಯಕ್ಷ ದೇವರಾಜ್, ಟಿಎಪಿಸಿಎಂಎಸ್ ಅಧ್ಯಕ್ಷ ಸೊಣ್ಣಪ್ಪ, ತಾಲೂಕು ಕಾರ್ಯನಿರತ ಪರ್ತಕರ್ತರ ಸಂಘದ ಉಪಾಧ್ಯಕ್ಷ ನಾರಾಯಣರಾವ್ ಎಂ.ಬಿ. ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.