ಬೆಂಗಳೂರು ಗ್ರಾಮಾಂತರ

ಭಾರತ್ ಬಂದ್: ಇಂದು ಶಾಲಾ- ಕಾಲೇಜುಗಳಿಗೆ ರಜೆ

Published On :

ರಾಮನಗರ: ಭಾರತ್ ಬಂದ್ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಶಾಲೆ-ಕಾಲೇಜುಗಳಿಗೆ ನಾಳೆ (ಫೆ.20) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿ.ಶ್ರೀರಾಮರೆಡ್ಡಿ ಘೋಷಿಸಿದ್ದಾರೆ.
ದೇವನಹಳ್ಳಿ
ದೇವನಹಳ್ಳಿ:  ವಿವಿಧ ಕಾರ್ಮಿಕ ಸಂಘಟನೆಗಳು ಫೆ. 20 ಮತ್ತು 21 ರಂದು ಕರೆ ನೀಡಿರುವ ರಾಷ್ಟ್ರವ್ಯಾಪಿ ಬಂದ್‌ಗೆ ದೇವನಹಳ್ಳಿ ತಾಲೂಕು ಖಾಸಗಿ ಶಾಲೆಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿರುವುದರಿಂದ ತಾಲೂಕಿನ ಎಲ್ಲ ಖಾಸಗಿ ಶಾಲೆಗಳು ಎರಡು ದಿನಗಳು ಮುಚ್ಚಲಿವೆ ಎಂದು ಖಾಸಗಿ ಶಾಲೆಗಳ ಒಕ್ಕೂಟದ ಪರವಾಗಿ ಕೆ.ಶ್ರೀನಿವಾಸ್ ಅವರು ಪ್ರಕಟಣೆಯಲ್ಲಿ  ತಿಳಿಸಿ ತಾಲೂಕಿನ ಎಲ್ಲ ಖಾಸಗಿ ಶಾಲೆಗಳ ಆಡಳಿತ ಮಂಡಳಿಯವರು ಸಹಕರಿಸಬೇಕೆಂದು ಕೋರಿದ್ದಾರೆ.   
ಬೆಂ. ಗ್ರಾಮಾಂತರ ಜಿಲ್ಲೆ
ದೇವನಹಳ್ಳಿ: ವಿವಿಧ ಕಾರ್ಮಿಕ ಸಂಘಟನೆಗಳು ಫೆ.20 ಹಾಗೂ 21 ರಂದು ಕರೆ ನೀಡಿರುವ ರಾಷ್ಟ್ರ ವ್ಯಾಪಿ ಬಂದ್ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಶಾಲೆಗಳಿಗೆ ಬರಲು ಅನಾನುಕೂಲ ಆಗಲಿರುವುದರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಫೆ.20 ರಂದು ಮಾತ್ರ (ಒಂದು ದಿನ) ರಜ ಘೋಷಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಚ್.ವಿ.ವೆಂಕಟೇಶಪ್ಪ ತಿಳಿಸಿದ್ದಾರೆ. ಫೆ.20 ರಂದು ಶಾಲೆಗಳಿಗೆ ರಜ ಘೋಷಿಸಿರುವ ಹಿನ್ನೆಲೆಯಲ್ಲಿ ಫೆ.24 ರಂದು ಭಾನುವಾರ ಎಂದಿನಂತೆ ಸರ್ಕಾರಿ ಶಾಲೆಗಳು ಕೆಲಸ ಮಾಡಲಿವೆ ಎಂದು ಉಪನಿರ್ದೇಶಕರು ತಿಳಿಸಿದ್ದಾರೆ.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.