ಬೆಂಗಳೂರು ಗ್ರಾಮಾಂತರ

ಗ್ರಾಮೀಣ ಭಾಗದಲ್ಲಿ ಕ್ರಾಂತಿಯಾಗಲಿ

Published On :

ಸೂಲಿಬೆಲೆ: ತಂತ್ರಜ್ಞಾನದ ಹೊಡತಕ್ಕೆ ಸಿಕ್ಕಿ ನಶಿಸುತ್ತಿರುವ ನಾಟಕ ಕಲೆ ಉಳಿಸುವ ಸಂಬಂಧ ನಾಟಕೋತ್ಸವ ಮೂಲಕ ಗ್ರಾಮೀಣ ಭಾಗದಲ್ಲಿ ಅರಿವು ಮೂಡಿಸುವ ಕ್ರಾಂತಿಯಾಗಬೇಕು ಎಂದು ಸ್ವಾತಂತ್ರ್ಯ ಹೋರಾಟಗಾರ ಸೂ.ರಂ ರಾಮಯ್ಯ ಸಲಹೆ ನೀಡಿದ್ದಾರೆ.
ಇಲ್ಲಿಗೆ ಸಮೀಪದ ತಿಮ್ಮಸಂದ್ರದ ಗ್ರಾಮದ ಮಂಜುನಾಥ ಕಲ್ಯಾಣಮಂಟಪದಲ್ಲಿ ಪ್ರಾರಂಭವಾದ ಎರಡು ದಿನಗಳ ಗ್ರಾಮೀಣ ನಾಟಕೋತ್ಸವದಲ್ಲಿ ಕೃಷ್ಣ ಸಂಧಾನ ಪೌರಾಣಿಕ ನಾಟಕ ಉದ್ಘಾಟಿಸಿ ಮಾತನಾಡಿದರು.
ರಂಗ ಕಲಾವಿದ ಹಾಗೂ ನಾಟಕ ನಿರ್ದೇಶಕ ಡಿ.ಲಕ್ಷ್ಮಿನಾರಾಯಣ್ ಮಾತನಾಡಿ,ನಾಟಕಗಳು ಸುಗ್ಗಿಯ ಕಾಲದಲ್ಲಿ ರಾಜ್ಯದ ನಾನಾ ಕಡೆಯಲ್ಲಿ ನಡೆಯುವದು ಸಹಜ. ಪೂರ್ವಿಕರು ಮನರಂಜನೆಗಾಗಿ ಕಂಡುಕೊಂಡ ನಾಟಕದ ಮೂಲಕ ಆನೇಕ ಗ್ರಾಮೀಣ ಭಾಗದ ಪ್ರತಿಭೆಗಳು ಅಭಿನಯದ ಕಲೆ ಉಳಿಸುತ್ತಿದ್ದಾರೆ ಎಂದರು. ಲಕ್ಕೊಂಡಹಳ್ಳಿ ಗ್ರಾಪಂ ಉಪಾಧ್ಯಕ್ಷೆ
ಭಾರತೀಗೌಡ, ಗ್ರಾಪಂ ಮಾಜಿ ಅಧ್ಯಕ್ಷ ಮುನಿವೆಂಕಟಪ್ಪ, ಕಲಾವಿದ ನಾಗೇಂದ್ರಪ್ಪ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.