ಕಬ್ಬಿನ ಗದ್ದೆಯಲ್ಲಿ ರೈತ ಸಜೀವ ದಹನ
ಪಾಂಡವಪುರ: ಕಬ್ಬಿನ ತರಗಿಗೆ ಬೆಂಕಿ ಹಚ್ಚಲು ಹೋದ ರೈತ ಸಜೀವ ದಹನವಾಗಿರುವ ಘಟನೆ ತಾಲೂಕಿನ ಹರವು ಗ್ರಾಮದಲ್ಲಿ ಜರುಗಿದೆ.
ತಾಲೂಕಿನ ಕ್ಯಾತನಹಳ್ಳಿ ಮೊಗಣ್ಣಗೌಡ (70) ಮೃತಪಟ್ಟ ವೃದ್ಧ. ಅವರಿಗೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರಿದ್ದಾರೆ.
ಶುಕ್ರವಾರ ಬೆಳಿಗ್ಗೆ ಕಬ್ಬಿನ ಗದ್ದೆಗೆ ತೆರಳಿ ತರಗನ್ನು ಒಟ್ಟುಗೂಡಿಸಿ ಒಂದೆಡೆ ಗುಡ್ಡೆ ಮಾಡಿ ಅಕ್ಕಪಕ್ಕದ ಗದ್ದೆಗಳಿಗೆ ಬೆಂಕಿ ತಗಲದಂತೆ ಚೊಕ್ಕ ಮಾಡಿದ್ದರು. ಒಂದೇ ಕಡೆ ತರಗಿನ ಗುಡ್ಡೆ ಮಾಡಿ ತರಗಿನ ಗುಡ್ಡೆಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಧಗಧಗನೆ ಉರಿಯಲಾರಂಭಿಸಿತ್ತು. ತಕ್ಷಣವೇ ಮೊಗಣ್ಣಗೌಡ ಅವರು, ಗುಡ್ಡೆ ಬೇರ್ಪಡಿಸಲು ಯತ್ನಿಸಿದಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ.
ಈ ಸಂದರ್ಭ ಬೆಂಕಿ ಅವರನ್ನು ಆವರಿಸಿದಾಗ ಮೊಗಣ್ಣಗೌಡ ಕಿರುಚಿಕೊಂಡಾಗ ಪಕ್ಕದ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದ ರೈತರು ಸ್ಥಳಕ್ಕೆ ದಾವಿಸಿದರು. ಅಷ್ಟರೊಳಗೆ ಮೊಗಣ್ಣ ದೇಹ ಸಂಪೂರ್ಣ ದಹನವಾಗಿತ್ತು. ಸುದ್ದಿ ತಿಳಿದ ಪಟ್ಟಣ ಪೊಲೀಸರು ಸ್ಥಳಕ್ಕೆ ಒಂದು ಪರಿಶೀಲನೆ ನಡೆಸಿದರು. ಪ್ರಕರಣ ದಾಖಲಿಸಿದರು.
ಪರಿಹಾರಕ್ಕೆ ಒತ್ತಾಯ: ರೈತ ನಾಯಕ ಕೆ.ಎಸ್. ಪುಟ್ಟಣ್ಣಯ್ಯ ಸ್ಥಳಕ್ಕೆ ಭೇಟಿ ನೀಡಿ ತಹಸೀಲ್ದಾರ್ ಹಾಗೂ ಕೃಷಿ ಸಹಾಯಕ ನಿರ್ದೇಶಕರನ್ನು ಕರೆಸಿ ಮೃತ ರೈತನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಕಲ್ಪಿಸುವಂತೆ ಆಗ್ರಹಿಸಿದರು.
ಸ್ಥಳೀಯ ತಹಸೀಲ್ದಾರ್ ಅವರು 10000 ಪರಿಹಾರ ಕಲ್ಪಿಸುವ ಭರವಸೆ ನೀಡಿದರು.
ಕೃಷಿ ಸಹಾಯಕ ನಿರ್ದೇಶಕ ಮಹದೇವಯ್ಯ ಮಾತನಾಡಿ, ಘಟನೆ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಸರ್ಕಾರದ ನಿರ್ದೇಶನದಂತೆ ಪರಿಹಾರ ಕ್ರಮ ಜರುಗಿಸಲಾಗುವುದು ಎಂದರು. ಕ್ಯಾತನಹಳ್ಳಿ ಸಾರ್ವಜನಿಕ ಆಸ್ಪತ್ರೆಯ ವೈದ್ಯ ಡಾ. ಶೀಲಾ ಶವಪರೀಕ್ಷೆ ನಡೆಸಿದರು. ಜಿ.ಪಂ. ಸದಸ್ಯ ಎ.ಎಲ್. ಕೆಂಪೂಗೌಡ ಮೃತ ಕುಟುಂಬದವರಿಗೆ ಸಾಂತ್ವನ ಹೇಳಿದರು.
ಮೃತ ರೈತ ಮೊಗಣ್ಣಗೌಡನಿಗೆ ಇಬ್ಬರು ಗಂಡು ಮಕ್ಕಳು ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

