ಆಂಗ್ಲಭಾಷಾ ಮೋಹ ಬೇಡ: ಬಸವರಾಜೇಗೌಡ ಕಿವಿಮಾತು
ಸೂಲಿಬೆಲೆ: ಖಾಸಗಿ ಶಾಲೆಗಳಲ್ಲಿನ ಠುಸ್, ಪುಸ್ ಇಂಗ್ಲಿಷ್ ವ್ಯಾಮೋಹಕ್ಕೆ ಒಳಗಾಗುತ್ತಿರುವ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಂದ ದೂರ ಮಾಡುತ್ತಿದ್ದಾರೆ. ಖಾಸಗಿ ಶಾಲೆಗಳಲ್ಲಿನ ಕಲಿಕೆಗಿಂತ ಇನ್ನೂ ಹೆಚ್ಚಾಗಿ ಗುಣಾತ್ಮಕ ಮಟ್ಟದಲ್ಲಿ ಶಿಕ್ಷಕರ ಕಾರ್ಯನಿರ್ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಸಿ.ಬಸವರಾಜೇಗೌಡ ಹೇಳಿದ್ದಾರೆ.
ಸೂಲಿಬೆಲೆ ಕುರುಬರಹಟ್ಟಿ ಸರ್ಕಾರಿ ಶಾಲೆಯಲ್ಲಿ ಶನಿವಾರ ನಡೆದ ಹೋಬಳಿ ಮಟ್ಟದ ಪರೀಕ್ಷೆಗಳ ಪೂರ್ವ ಸಿದ್ಧತೆಯ ಶಿಕ್ಷಕರ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದರು. ಶಿಕ್ಷಕರು ಸರ್ಕಾರಿ ಶಾಲೆಗಳ ಬಗ್ಗೆ ಸಮಾಜದಲ್ಲಿರುವ ಕೀಳರಮೆಯನ್ನು ಹೋಗಲಾಡಿಸಬೇಕು, ಆರ್ಟಿಇ ಯೋಜನೆಯಡಿಯಲ್ಲಿ ತಾಲೂಕಿನ ಅರ್ಹ ಶಾಲೆಗಳಲ್ಲಿ ಮಕ್ಕಳನ್ನು ದಾಖಲಿಸುವ ಸಂಬಂಧ ವ್ಯಾಪಕ ಪ್ರಚಾರವನ್ನು ಮಾಡಿ ಪೋಷಕರ ಗಮನ ಸೆಳೆಯಲಾಗಿದೆ. ಬಡವರಿಗೆ ಈ ಯೋಜನೆ ಸೌಲಭ್ಯ ಸಿಗುವಂತೆ ಮಾಡಬೇಕು.
ಇದರಿಂದ ಯಾವುದೇ ಮಗು ವಂಚಿತರಾಗಬಾರದು ಎಂದರು.ಇದೇ ವೇಳೆ ಶಿಕ್ಷಣ ಸಂಯೋಜಕ ಮಲ್ಲೇಶ್, ಚಿನ್ನಸ್ವಾಮಿಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಶ್ರೀನಿವಾಸ್, ಅತ್ತಿಬೆಲೆ ಶಾಲೆ ಮುಖ್ಯ ಶಿಕ್ಷಕ ಶರಣಪ್ಪ ಕಂಬಳಿ, ಶಿಕ್ಷಕರ ಸಂಘದ ಸಂಘಟನೆ ಕಾರ್ಯದರ್ಶಿ ಆಶ್ವತ್ಥ್ , ನಿವೃತ್ತ ಮುಖ್ಯ ಶಿಕ್ಷಕ ವೀರೇಗೌಡ, ಶ್ರೀನಿವಾಸ್ ಅವರನ್ನು ಸನ್ಮಾನಿಸಲಾಯಿತು. ಗ್ರಾಪಂ ಅಧ್ಯಕ್ಷ ನಾರಾಯಣಪ್ಪ, ಎಸ್ಡಿಎಂಸಿ ಅಧ್ಯಕ್ಷ ಮುನಿರಾಜ್, ಎಸ್.ವೈ ನಾಗರಾಜ್, ಮುಖ್ಯ ಶಿಕ್ಷಕಿ ಲೀಲಾವತಿ, ಸಿಆರ್ಪಿ ಮುತ್ತುರಾಜ್ ಸೇರಿದಂತೆ ಮುಖಂಡರು, ಗ್ರಾಮಸ್ಥರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

