ಬೆಂಗಳೂರು ಗ್ರಾಮಾಂತರ

ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣಕ್ಕೆ ಶ್ರಮಿಸಲಿ

Published On :

ಮಾಗಡಿ: ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣ ಮಾಡಲು ಎಲ್ಲರೂ ಶ್ರಮಿಸಬೇಕು ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೆ. ಮುದ್ದುರಾಜ ಯಾದವ್ ನುಡಿದರು.
ಅವರು ತಗ್ಗೀಕುಪ್ಪೆ  ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 2ನೇ ಸುತ್ತಿನ ಪಲ್ಸೆ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾಯಂದಿರು ತಮ್ಮ 5 ವರ್ಷದ ಒಳಗಿನ ಮಕ್ಕಳಿಗೆ ತಪ್ಪದೆ ಕಡ್ಡಾಯ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ ರಾಷ್ಟ್ರ ನಿರ್ಮಾಣದಲ್ಲಿ ಭಾಗಿಯಾಗುವಂತೆ ಕರೆ ನೀಡಿದರಲ್ಲದೆ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಆಶಾ ಕಾರ್ಯಕರ್ತೆಯರಿಗೆ ತಲಾ 500 ರು. ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ವೈದ್ಯ ಶಶಾಂಕ್ ಮಾತನಾಡಿ  5 ವರ್ಷ ತುಂಬುವವರೆವಿಗೂ ಪೋಲಿಯೋ ಲಸಿಕೆ ಹಾಕಿಸಬೇಕು ಎಂದರು.
ಪಟ್ಟಣದಲ್ಲಿ 3,541, ಗ್ರಾಮೀಣ ಭಾಗದಲ್ಲಿ 15,838 ಒಟ್ಟಾರೆ  ತಾಲೂಕಿನಲ್ಲಿ 19,379 ಮಕ್ಕಳಿದ್ದಾರೆ.  ತಾಲೂಕಿನಲ್ಲಿ  62  ಪೋಲಿಯೋ ಕೇಂದ್ರಗಳನ್ನು ತೆರೆಯಲಾಗಿದ್ದು, 188 ತಂಡಗಳು ಪೋಲಿಯೋ  ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ. 18 ಮೇಲ್ವಿಚಾರಕ ತಂಡಗಳು ಕಾರ್ಯನಿರ್ವಹಿಸಲಿವೆ. ಎಎನ್‌ಎಂ- 62,  ಆಶಾ ಕಾರ್ಯಕರ್ತೆರು-175, ಎಡ್ಲೂ -369 ಮಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ರವಿಕುಮಾರ್ ತಿಳಿಸಿದರು. ಗ್ರಾಮ ಪಂಚಾಯ್ತಿ ಮಾಜಿ ಅಧ್ಯಕ್ಷ ಗೋವಿಂದಪ್ಪ, ಹನುಮಂತಯ್ಯ, ನಾಗರಾಜು, ಶಿಕ್ಷಕ ಮಾರಣ್ಣ, ಎಂ.ಎಸ್.ಸಿದ್ದಲಿಂಗೇಶ್ವರ್,
ಸಮಂತ್ ಕುಮಾರ್   ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.