ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಡಾ.ರಘುನಾಥ್ ಚಾಲನೆ
ರಾಮನಗರ: ಎರಡನೇ ಹಂತದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಘುನಾಥ್ ಚಾಲನೆ ನೀಡಿದರು.
ನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನವಜಾತ ಶಿಶುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿ, ಭಾರತವನ್ನು ಪೋಲಿಯೋ ಮುಕ್ತ ರಾಷ್ಟ್ರವನ್ನಾಗಿಸಲು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಪೋಷಕರಿಗೆ ಕರೆ ನೀಡಿದರು.
ಕಳೆದ ಜನವರಿ 20ರಂದು ನಡೆದ ಪ್ರಥಮ ಹಂತದ ಕಾರ್ಯಕ್ರಮದಲ್ಲಿ ನಿಗದಿತ ಗುರಿಗಿಂತ ಹೆಚ್ಚು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಶೇ. 103ರಷ್ಟು ಸಾಧನೆ ಮಾಡಲಾಗಿದೆ. ಈ ಬಾರಿ ಜಿಲ್ಲೆಯ 1 ಲಕ್ಷದ 15 ಸಾವಿರದ 140 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜಿಲ್ಲೆಯಾದ್ಯಂತ 541 ಲಸಿಕಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು.
ಇಂದು ಲಸಿಕಾ ಕೇಂದ್ರಗಳಲ್ಲಿ ಮಾತ್ರ ಲಸಿಕೆ ಹಾಕಲಾಗುತ್ತಿದೆ. 25 ಮತ್ತು 26ರಂದು ಗ್ರಾಮೀಣ ಪ್ರದೇಶಗಳಲ್ಲಿ ಹಾಗೂ ನಗರ ಪ್ರದೇಶಗಳಲ್ಲಿ 27ರವರೆಗೆ ಮನೆಮನೆಗಳಿಗೆ ಭೇಟಿ ನೀಡಿ ಮಕ್ಕಳಿಗೆ ಲಸಿಕೆ ಹಾಕಲಾಗುವುದು ಎಂದು ತಿಳಿಸಿದರು.
ಲಸಿಕೆ ಹಾಕುವ ಸಂಬಂಧ ಕೆಲವರು ಸುಳ್ಳು ಸುದ್ದಿ ಹಬ್ಬಿಸುವ ಮೂಲಕ ಗೊಂದಲ ಉಂಟು ಮಾಡುತ್ತಿದ್ದಾರೆ. ವದಂತಿಗಳಿಗೆ ಕಿವಿಗೊಡದೆ ಲಸಿಕೆ ಹಾಕಿಸುವಂತೆ ಡಾ.ರಘುನಾಥ್ ಮನವಿ ಮಾಡಿದರು.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಜೆ.ವಿಜಯನರಸಿಂಹ, ಪಲ್ಸ್ ಪೋಲಿಯೋ ಜಿಲ್ಲಾ ನೋಡಲ್ ಅಧಿಕಾರಿ ಡಾ.ಸುರೇಖಾ ಪಾಟೀಲ್, ರೋಟರಿ ಸಂಸ್ಥೆ ಅಧ್ಯಕ್ಷ ಆರ್.ವಿ.ಸುರೇಶ್, ಎಚ್.ಪಿ.ಮಹಾಲಿಂಗಯ್ಯ,
ಡಾ.ಇಬ್ರಾಹಿಂ ಖಲೀಲ್, ಆರ್.ಕುಮಾರ ಸ್ವಾಮಿ, ಚಂದ್ರಶೇಖರ್, ಟಿ.ಕೃಷ್ಣೇಗೌಡ ಮತ್ತಿತರರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

