ಬೆಂಗಳೂರು ಗ್ರಾಮಾಂತರ

ಕೊಳಾಯಿಯಲ್ಲಿ ಕೊಳಚೆ ನೀರು: ಶಿವರಾಜೇಗೌಡ ಆಕ್ರೋಶ

Published On :

ರಾಮನಗರ: ಕಲುಷಿತ ನೀರು ಸೇವನೆಯಿಂದ ಮಕ್ಕಳ ಅಸ್ವಸ್ಥತೆ ಸಂಭವಿಸಿದ್ದ ನಗರದ ಐಜೂರು ಬಡಾವಣೆಯ ಮೊರಾರ್ಜಿ ವಸತಿ ಶಾಲೆಗೆ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷ ಶಿವರಾಜೇಗೌಡ ಗುರುವಾರ ಭೇಟಿ ನೀಡಿ ಪರಿಶೀಲಿಸಿದರು.
ಘಟಕದ ಅಧಿಕಾರಿಗಳಾದ ರಾಧಾ, ಹಿಂದುಳಿದ ಮತ್ತು ಅಲ್ಪ ಸಂಖ್ಯಾತರ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಸುಮಯಾ ರೂಹಿ ಜತೆ ಶಾಲೆಗೆ ಭೇಟಿ ನೀಡಿದ್ದ ಅವರು, ಶಾಲೆಯಲ್ಲಿ ಕಲ್ಪಿಸಿರುವ ಊಟ, ಕುಡಿಯುವ ನೀರು ಮತ್ತು ವಸತಿ ಸೌಲಭ್ಯಗಳನ್ನು ಪರಿಶೀಲಿಸಿದರು.
ಮೊರಾರ್ಜಿ ಶಾಲೆಗೆ ಕುಡಿಯುವ ನೀರು ಪೂರೈಸುವ ಪೈಪ್‌ಲೈನ್ ಒಡೆದು,  ಕೊಳಾಯಿಯಲ್ಲಿ ಕೊಳಚೆ ನೀರು ಮಿಶ್ರಣವಾಗಿ ಹರಿದು ಬರುತ್ತಿರುವುದನ್ನು ಗಮನಿಸಿದ ಶಿವರಾಜೇಗೌಡ ನೇತೃತ್ವದ ತಂಡ ವಾರ್ಡನ್ ಮತ್ತು ಸಿಬ್ಬಂದಿ ವಿರುದ್ಧ ಹರಿಹಾಯ್ದರು.
ಇನ್ನಾದರೂ ಗುಣಮಟ್ಟದ ಶಿಕ್ಷಣದ ಜತೆಗೆ ಶುದ್ಧ ನೀರು, ಪೌಷ್ಟಿಕ ಆಹಾರದ ಜತೆಗೆ ಮೂಲ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸೂಚಿಸಿದರು.
ಶೌಚಾಲಯದ ಕೊರತೆ: 190 ಮಕ್ಕಳಿರುವ ಈ ಶಾಲೆಯಲ್ಲಿ ಇರುವುದು 4 ಶೌಚಾಲಯಗಳಷ್ಟೇ. ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕ ಹಾಸ್ಟೆಲ್ ಇಲ್ಲಿಲ್ಲ. ಗೋದಾಮು ಹೋಲುವ ಈ ಬಾಡಿಗೆ ಕಟ್ಟಡವನ್ನು ತಕ್ಷಣ ಬದಲಿಸಬೇಕು ಎಂದು ಆದೇಶಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.