ಪತ್ನಿ ಪಾಲನೆಗಾಗಿ ಎಚ್ಡಿಕೆಯಿಂದ ರಾಮನಗರ ಕಡೆಗಣನೆ
ರಾಮನಗರ: ಸಂಸದ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಪತ್ನಿ ಸ್ಪರ್ಧೆ ಕಾರಣಕ್ಕೆ ತಮ್ಮೆಲ್ಲಾ ಅನುದಾನವನ್ನು ನೆರೆಯ ಚನ್ನಪಟ್ಟಣ ಕ್ಷೇತ್ರಕ್ಕೆ ನೀಡುತ್ತಿದ್ದು, ರಾಮನಗರ ಕಡೆಗಣಿಸುತ್ತಿದ್ದಾರೆ ಎಂದು ಮಾಜಿ ಶಾಸಕ ಸಿ.ಎಂ. ಲಿಂಗಪ್ಪ ಆರೋಪಿಸಿದ್ದಾರೆ.
ನಗರದ ನಾಲಬಂದವಾಡಿಯಲ್ಲಿ ನಡೆದ ಕಾಂಗ್ರೆಸ್ ಮಹಿಳಾ ಅಲ್ಪಸಂಖ್ಯಾತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಚನ್ನಪಟ್ಟಣಕ್ಕೆ 4 ಕೋಟಿ ಅನುದಾನ ವಿತರಿಸಿರುವ ಕುಮಾರಸ್ವಾಮಿ 2 ಬಾರಿ ಶಾಸಕರನ್ನಾಗಿ ಆರಿಸಿದ ರಾಮನಗರಕ್ಕೆ ಅನುದಾನ ನೀಡಿಲ್ಲ ಎಂದು ಟೀಕಿಸಿದರು.
ರಾಮನಗರದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಎದ್ದು ಕಾಣುತ್ತಿದೆ. ಕುಮಾರಸ್ವಾಮಿ ಅವರು ಇಲ್ಲಿವರೆಗೆ ಒಂದು ನಿವೇಶನ ಹಂಚಿಲ್ಲ. ದುಡ್ಡು ಬಾಚುವುದರಲ್ಲಿ ನಿರತರಾಗಿರುವ ಬಿಜೆಪಿ ಸರ್ಕಾರದ ಸಚಿವರೂ ಈ ಜಿಲ್ಲೆಯನ್ನು ನಿರ್ಲಕ್ಷಿಸಿದ್ದಾರೆ ಎಂದು ಅವರು ಹೇಳಿದರು.
ಕ್ಷೇತ್ರದ ಮತದಾರರು ಜೆಡಿಎಸ್ ಮತ್ತು ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲೂ ಸ್ಥಳೀಯ ಅಭ್ಯರ್ಥಿಯನ್ನೇ ಚುನಾಯಿಸುವ ಮೂಲಕ ಸ್ವಾಭಿಮಾನ ಮೆರೆಯಬೇಕು ಎಂದು ಲಿಂಗಪ್ಪ ಕರೆ ನೀಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಯ್ಯದ್ ಜಿಯಾವುಲ್ಲಾ ಮಾತನಾಡಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ನಿಶ್ಚಿತ. ರಾಮನಗರದ 5 ಸಾವಿರ ಬಡವರಿಗೆ ಉಚಿತ ನಿವೇಶನ ಹಂಚಿಕೆ ಮಾಡಲು ಪಕ್ಷ ಬದ್ಧ ಎಂದು ತಿಳಿಸಿದರು.
ಅಲ್ಪಸಂಖ್ಯಾತರನ್ನು ಮತ ಬ್ಯಾಂಕ್ ಮಾಡಿಕೊಂಡಿರುವ ಕುಮಾರಸ್ವಾಮಿ ಅವರು ಸಮುದಾಯಕ್ಕೆ ನೀಡಿರುವ ಕೊಡುಗೆ ಶೂನ್ಯ. ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ. ಅಲ್ಪಸಂಖ್ಯಾತರಿರುವ ವಾರ್ಡ್ಗೆ ಒಮ್ಮೆಯೂ ಭೇಟಿ ನೀಡಿಲ್ಲ ಎಂದು ಆರೋಪಿಸಿದರು.
ಕಾರ್ಯದರ್ಶಿ ಮರಿದೇವರು ಮಾತನಾಡಿ, ಕುಮಾರಸ್ವಾಮಿ ಸ್ವಾರ್ಥ ರಾಜಕಾರಣ ಮಾಡುತ್ತಿದ್ದಾರೆ. ಮುಸ್ಲಿಮರಿಗೆ ಪ್ರತ್ಯೇಕ ಮಸೀದಿ ನಿರ್ಮಿಸುವ ಕುರಿತು 9 ವರ್ಷದ ಹಿಂದೆ ನೀಡಿದ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ ಎಂದು ಟೀಕಿಸಿದರು. ರಮೇಶ್, ಬಾಬು ಸೇಠ್, ಆರೀಫ್ ಖುರೇಷಿ, ಸಯ್ಯದ್ ಉಮರ್, ಅಮ್ಜದ್ ಸಾಹುಕರ್, ಪುಟ್ಟಣ್ಣ, ಪರ್ವೀಜ್, ಜಮ್ಷದ್, ಸಯ್ಯದ್ ಅಬ್ದುಲ್ ಅಜೀಮ್ ಖಾದ್ರಿ, ನಜೀಮ್ ಅಹಮದ್, ಕಲೀಲ್, ಅಕ್ರಂ ಬಾನು, ನಾರಾಯಣಪ್ಪ, ರಾಮಯ್ಯ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

