ವೃದ್ಧಾಪ್ಯದಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಡುವುದು ಕರ್ತವ್ಯ
ರಾಮನಗರ: ಕುಟುಂಬದ ನೊಗಕ್ಕೆ ಹೆಗಲು ಕೊಟ್ಟು ಜೀವನವನ್ನೆಲ್ಲಾ ಸವೆಸಿದವರಿಗೆ ವೃದ್ಧಾಪ್ಯದಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಂ.ಕೆ.ಪ್ರಹ್ಲಾದ್ ಕರೆ ನೀಡಿದರು.
ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಮತ್ತು ಸರ್ಕಾರಿ ನಿವೃತ್ತ ನೌಕರರ ಸಂಘದಿಂದ ಗುರುವಾರ ನಡೆದ ಹಿರಿಯ ನಾಗರಿಕರ ಹಕ್ಕುಗಳ ಕುರಿತ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕುಟುಂಬದ ಆಧಾರಸ್ಥಂಬವಾಗಿ ಮಕ್ಕಳು, ಮೊಮ್ಮಕ್ಕಳು ಸೇರಿದಂತೆ ಎಲ್ಲರ ಬಾಳಿಗೆ ಬೆಳಕು ನೀಡಿದ ಹಿರಿಯರನ್ನು ನಾವು ಗೌರವಿಸಬೇಕು. ಅವರ ಹಕ್ಕುಗಳಿಗೆ ಚ್ಯುತಿಬಾರದಂತೆ ನಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಹಿರಿಯ ನಾಗರಿಕರನ್ನು ಗೌರವಿಸಿದರೆ ತಮ್ಮನ್ನು ತಾವೇ ಗೌರವಿಸಿದಂತೆ. ಹಿರಿಯ ನಾಗರಿಕರ ಜೀವನಕ್ಕೆ ಆಸರೆಯಾಗಲು ಸರ್ಕಾರದಿಂದ ಸಿಗಬೇಕಾದ ವೃದ್ಧಾಪ್ಯ ವೇತನ ಸಹಿತ ಎಲ್ಲ ಸವಲತ್ತುಗಳನ್ನು ಪ್ರಾಮಾಣಿಕವಾಗಿ ಕಲ್ಪಿಸಿಕೊಡಬೇಕು. ಒಂದಲ್ಲಾ ಒಂದು ದಿನ ನಾವೂ ವೃದ್ಧರಾಗುತ್ತೇವೆ ಎನ್ನುವುದನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದರು.
ಹೊಣೆ ಮರೆತವರು: ಸಮಾಜದಲ್ಲಿ ಅದೆಷ್ಟೋ ಮಂದಿ ತಮ್ಮ ಹೊಣೆಗಾರಿಕೆಯನ್ನೇ ಮರೆತು ವರ್ತಿಸುತ್ತಿದ್ದಾರೆ.
ವೃದ್ಧರನ್ನು ನಿರ್ಲಕ್ಷಿಸಿ, ಅವರ ಗೌರವ ಹಾಗೂ ಹಕ್ಕುಗಳಿಗೆ ಚ್ಯುತಿ ತಂದೊಡ್ಡಿದವರು ನಮ್ಮ ನಡುವೆ ಇದ್ದಾರೆ ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ವಿ.ಪುಷ್ಪಾವತಿ ವಿಷಾದಿಸಿದರು.
ಹಿರಿಯರನ್ನು ಪೋಷಣೆ ಮಾಡುವ ಹೊಣೆಯಿಂದ ಯಾರೂ ವಿಮುಖರಾಗಬಾರದು. ವೃದ್ಧರ ರಕ್ಷಣೆಗೆ ಕಾನೂನು ರೂಪಿಸಲಾಗಿದೆ. ಕಾನೂನು ಪಾಲನೆಗಿಂತಲೂ ಪ್ರೀತಿ, ಮಮಕಾರದಿಂದ ವೃದ್ಧರನ್ನು ಪೋಷಿಸಬೇಕು ಎಂದು ಅವರು ಕಿವಿಮಾತು ಹೇಳಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಕೆ.ನಾರಾಯಣ ಪ್ರಸಾದ್ ಮಾತನಾಡಿ, ಹಿರಿಯ ನಾಗರಿಕರು ದೇಶದ ಆಸ್ತಿ. ಶೇಕಡ 7ರಷ್ಟಿರುವ ಅವರನ್ನು ನಾವು ಗೌರವಿಸುವುದಲ್ಲದೆ ವೃದ್ಧಾಪ್ಯದಲ್ಲಿ ನೆಮ್ಮದಿ ಜೀವನ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕು ಎಂದರು.
ಗೌರವಯುತವಾಗಿ ಜೀವನ ನಡೆಸುವುದಕ್ಕಾಗಿ ವೃದ್ಧರಿಗೆ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆ ರೂಪಿಸಿದೆ. ಆರ್ಥಿಕ ಭದ್ರತೆ, ಉಚಿತ ಕಾನೂನ ನೆರವು, ಆರೋಗ್ಯ ಸೇವೆ, ವಸತಿ, ಸೇರಿದಂತೆ ನಾನಾ ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.
ನಿವೃತ್ತ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿ.ಚಂದ್ರಪ್ಪ ಮಾತನಾಡಿದರು. ನ್ಯಾ. ಬಿ.ಕೆ.ಕೋಮಲ, ವಕೀಲರ ಸಂಘದ ಅಧ್ಯಕ್ಷ ಟಿ.ಕೆ.ಶಾಂತಪ್ಪ, ಉಪಾಧ್ಯಕ್ಷ ಸಿ.ಚಿಕ್ಕಪ್ಪಾಜಿ, ಕಾನೂನು ಸೇವೆಗಳ ಪ್ರಾಧಿಕಾರದ ಕೃಷ್ಣಸ್ವಾಮಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

