ಕೋಟ್ಯಂತರ ರು. ಹಗರಣದ ವಿರುದ್ಧ ರಣ ಕಹಳೆ ಊದಲು ಸಂಘಟಿತರಾಗಿ
ಮಾಗಡಿ: ಕ್ಷೇತ್ರದಲ್ಲಿ ನಡೆದಿರುವ ಕೋಟ್ಯಂತರ ರು. ಹಗರಣದ ವಿರುದ್ಧ ರಣ ಕಹಳೆ ಊದಲು ಕಾಂಗ್ರೆಸ್ ಕಾರ್ಯಕರ್ತರೇ ಸಂಘಟಿತರಾಗೋಣ ಎಂದು ಮಾಜಿ ಶಾಸಕ ಸಿ.ಎಂ. ಲಿಂಗಪ್ಪ ಅವರ ಪುತ್ರ ಸಿ.ಎಲ್. ಚಂದ್ರಶೇಖರ್ ಕರೆ ನೀಡಿದರು.
ಅವರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಕರೆದಿದ್ದ ಮುಖಂಡರ ಸಭೆಯಲ್ಲಿ ಮಾತನಾಡಿ, ಮಾಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೊಂದಲ ನಿವಾರಣೆಗೆ ಕೂಡಲೆ ವರಿಷ್ಠರು ನಿರ್ದಿಷ್ಟವಾದ ತೀರ್ಮಾನ ಕೈಗೊಳ್ಳಬೇಕಿದೆ. ಜೆಡಎಸ್ ದರ್ಪ ದೌರ್ಜನ್ಯ, ಭ್ರಷ್ಟಾಚಾರದ ವಿರುದ್ಧ ಬೃಹತ್ ಪ್ರತಿಭಟನಾ ಹೋರಾಟ ಸಭೆ ಏರ್ಪಡಿಸಲು ಪಕ್ಷ ತೀರ್ಮಾನಿಸಿದ್ದು, ಇದೇ ವೇಳೆ ಜಿಲ್ಲಾ ಎಸ್ಪಿ ಅವರನ್ನು ಸಭೆಗೆ ಕರೆಸಿ ತಾಲೂಕಿನಲ್ಲಿ ನಡೆದಿರುವ ಸುಳ್ಳು ಪ್ರಕರಣಗಳ ಬಗ್ಗೆ ಮನವರಿಕೆ ಮಾಡಲು ಫೆಬ್ರವರಿಯಲ್ಲಿ ಬೃಹತ್ ಸಭೆ ನಡೆಸಲು ದಿನಾಂಕ ನಿಗದಿ ಮಾಡಲಾಗುವುದು ಎಂದರು.
ಕೆಪಿಸಿಸಿ ಸದಸ್ಯ ಎ.ಮಂಜು ಮಾತನಾಡಿ ಈಗಾಗಲೇ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿರುವ ನೂರಾರು ಕೋಟಿ ಹಗರಣ ಬಿಡುಗಡೆ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯ್ತಿ ಹಾಗೂ ಪುರಸಭೆಯಲ್ಲಿ ನಡೆದಿರುವ ಹಗರಣ ಬಯಲು ಮಾಡುವುದಾಗಿ ವಿವರಿಸಿದರು.
ಬೂತ್ ಕಮಿಟಿ ರಚನೆ: ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ಪಕ್ಷವು ಬೂತ್ ಮಟ್ಟದಲ್ಲಿ ಕಮಿಟಿ ರಚಿಸಲಿದ್ದು, ಎಲ್ಲಾ ಸಮುದಾಯದ ಸಮಾವೇಶ ಏರ್ಪಡಿಸಲು ಚಿಂತಿಸಲಾಗಿದೆ ಎಂದರು.
ಹಿರಿಯ ಮುಖಂಡ ಕೆ.ಎಚ್.ಕೃಷ್ಣಮೂರ್ತಿ ಮಾತನಾಡಿ ಕಾಂಗ್ರೆಸ್ ಬೂತ್ ಮಟ್ಟದ ಸಮಿತಿಯಲ್ಲಿ ಎಲ್ಲಾ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಿದೆ. ಕ್ಷೇತ್ರದಲ್ಲಿ ಕೊಬ್ಬಿರುವ ಜೆಡಿಎಸ್ ಮುಖಂಡರಿಗೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲವಿನ ಸಂದೇಶ ರವಾನಿಸಬೇಕಿದೆ ಎಂದರು.
ತಾಲೂಕು ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಚಿಗಳೂರು ಗಂಗಾಧರ್, ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎನ್. ಮಂಜುನಾಥ್, ಪುರಸಭೆ ಮಾಜಿ ಅಧ್ಯಕ್ಷ ರಂಗಹನುಮಯ್ಯ, ಟಿ. ಭೋಗೇಶ್, ಸಿ.ಜಯರಾಮು ಸೇರಿದಂತೆ ನೂರಾರು ಕಾಂಗ್ರೆಸ್ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

