ದೇವನಹಳ್ಳಿ ತಾಲೂಕು ಸಾಹಿತ್ಯ ಸಮ್ಮೇಳನ ನಾಳೆ
ದೇವನಹಳ್ಳಿ: ದೇವನಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ನವರು ದೇವನಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇಲ್ಲಿನ ಸರ್ಕಾರಿ ಕಿರಿಯ ಕಾಲೇಜು ಮುಂಭಾಗದ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದಾರೆ ಎಂದು ದೇವನಹಳ್ಳಿ ನಗರ ಘಟಕ ಅಧ್ಯಕ್ಷ ಬಿ.ಎನ್.ಕೃಷ್ಣಪ್ಪ ಹೇಳಿದರು.
ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಸಮ್ಮೇಳನಾಧ್ಯಕ್ಷರಾಗಿ ದೇವನಹಳ್ಳಿಯವರೇ ಆದ ನಿವೃತ್ತ ಕನ್ನಡ ಪ್ರಾಧ್ಯಾಪಕರು ಹಾಗೂ ಸಾಹಿತಿಗಳಾದ ಜಿ. ವಿಜಯಕುಮಾರ್ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದ್ದು ಈಗಾಗಲೇ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗಿದೆ ಎಂದು ಗೌರವಾಧ್ಯಕ್ಷರಾದ ಎ.ಸಿ.ಗುರುಸ್ವಾಮಿ ತಿಳಿಸಿದರು.
ಬುಧವಾರ ಬೆಳಗ್ಗೆ 8 ಗಂಟೆಗೆ ಪುರಸಭಾಧ್ಯಕ್ಷರಾದ ವಸಂತಬಾಬು ಅವರಿಂದ ರಾಷ್ಟ್ರ ಧ್ವಜಾರೋಹಣ, ಕಸಾಪ ತಾಲೂಕು ಅಧ್ಯಕ್ಷ ರಾಜಗೋಪಾಲ್ರವರಿಂದ ಸಾಹಿತ್ಯ ಪರಿಷತ್ ಧ್ವಜಾರೋಹಣ ನಂತರ ಜಾನಪದ ಕಲಾ ತಂಡಗಳೊಂದಿಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಆಯೋಜಿಸಲಾಗಿದೆ. ಸಮಾರಂಭಕ್ಕೆ ಕೇಂದ್ರ ಸಚಿವರಾದ ಎಂ.ವೀರಪ್ಪ ಮೊಯ್ಲಿ ಅವರನ್ನು ಆಹ್ವಾನಿಸಲಾಗಿದ್ದು ಸಮ್ಮೇಳನದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎನ್. ಬಚ್ಚೇಗೌಡರು ನೆರವೇರಿಸಲಿದ್ದಾರೆ ಎಂದರು.
ತಾಲೂಕು ಕಸಾಪ ಅಧ್ಯಕ್ಷ ರಾಜಗೋಪಾಲ್ ಅಧ್ಯಕ್ಷತೆ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಶಾಸಕ ವೆಂಕಟಸ್ವಾಮಿ, ಬಸಪ ಅಧ್ಯಕ್ಷ ಷಣ್ಮುಖಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಬಚ್ಚೇಗೌಡ, ಜಿಲ್ಲಾ ಕಸಾಪ ಅಧ್ಯಕ್ಷ ಹುಲಿಕಲ್ ನಟರಾಜ್ ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಶರಣಯ್ಯ ಹಿರೇಮಠ್ ಅಧ್ಯಕ್ಷತೆಯಲ್ಲಿ ಕವಿಗೋಷ್ಠಿ, ವಿಜಯಪುರ ದೀವಿಗೆ ಯೋಗ ಶಿಕ್ಷಣ ಕೇಂದ್ರದ ಜಿ.ವಿ.ರವೀಂದ್ರ ಅಧ್ಯಕ್ಷತೆಯಲ್ಲಿ ಸಾಹಿತ್ಯ ಗೋಷ್ಠಿಗಳನ್ನು ಆಯೋಜಿಸಲಾಗಿದೆ ಎಂದು ಗುರುಸ್ವಾಮಿ ತಿಳಿಸಿದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಕಸಾಪ ಗೌರವಾಧ್ಯಕ್ಷರಾದ ಎ.ಸಿ. ಗುರುಸ್ವಾಮಿ ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ಸಿ.ನಾರಾಯಣಸ್ವಾಮಿ, ಮಾಜಿ ಶಾಸಕ ಜಿ.ಚಂದ್ರಣ್ಣ, ಎಂ. ಮುನಿನರಸಿಂಹಯ್ಯ ಹಾಗೂ ಪ್ರಮುಖರು ಭಾಗವಹಿಸಲಿದ್ದು ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಎಂಟು ಮಂದಿಗೆ ಸನ್ಮಾನಿಸಲಾಗುತ್ತದೆ ಎಂದು ಕೃಷ್ಣಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಾಹಿತ್ಯ ಪರಿಷತ್ತಿನ ಇ.ಸಿ. ಚನ್ನಬಸವರಾಜು, ರಮೇಶ್, ಶಿಕ್ಷಕರಾದ ಪುಟ್ಟಸ್ವಾಮಿ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

