ಶೋಷಿತ ಕುಟುಂಬಕ್ಕೆ ಸೂರು, ಶೌಚಾಲಯ: ಮುದ್ದುರಾಜ ಯಾದವ್
ಮಾಗಡಿ: ಶೋಷಿತ ಕುಟಂಬಕ್ಕೆ ಸೂರು, ಶೌಚಾಲಯ ಕಲ್ಪಿಸಬೇಕು ಎಂದು ತಾಲೂಕಿಗೆ 8 ಸಾವಿರ ಮನೆ ಮಂಜೂರಾತಿಯಾಗಿದ್ದು, ಈಗಾಗಲೇ 5,500 ಪಲಾನುಭವಿಗಳು ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಹೆಚ್ಚುವರಿಯಾಗಿ 2,534 ಮನೆ ಮಂಜೂರಾತಿಯಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಕೆ.ಮುದ್ದುರಾಜ ಯಾದವ್ ನುಡಿದರು.
ಅವರು ಕಲ್ಯಾ ಗ್ರಾಮ ಪಂಚಾಯ್ತಿ ಆವರಣದಲ್ಲಿ ಸೋಮವಾರ ಏರ್ಪಡಿಸಿದ್ದ 2010-11ನೇ ಸಾಲಿನ ಹೆಚ್ಚುವರಿ ಬಸವ ವಸತಿ ಯೋಜನೆಯ ಪಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದರು. ತಾಲೂಕಿನಲ್ಲಿ ಕಡುಬಡತನದಿಂದ ವಾಸಿಸುತ್ತಿರುವ ನಿರಾಶ್ರಿತ ಪಲಾನುಭವಿಗಳನ್ನು ಗುರುತಿಸಿ ಮನೆ ಮಂಜೂರಾತಿ ನೀಡಲಾಗುತ್ತಿದೆ. ಕಲ್ಯಾ ಗ್ರಾಮೀಣ ಜನತೆ ಇದರ ಸದುಪಯೋಗಪಡೆದುಕೊಳ್ಳಬೇಕು ಎಂದರು. ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಚ್.ಎನ್. ಅಶೋಕ್ ಮಾತನಾಡಿ ಬಿಡಿಸಿಸಿ ಬ್ಯಾಂಕ್ ಸ್ತ್ರೀ ಶಕ್ತಿ ಸಂಘಗಳಿಗೆ ಹಂತ, ಹಂತವಾಗಿ 5 ಲಕ್ಷದವರೆಗೂ ಶೇ. 3 ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುತ್ತದೆ. ಸದ್ಬಳಕೆ ಮಾಡಿಕೊಳ್ಳುವಂತೆ ಕರೆ ನೀಡಿದರು.
ಕಲ್ಯಾ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಲಕ್ಷ್ಮಮ್ಮ ಅಧ್ಯಕ್ಷತೆ ವಹಿಸಿದ್ದರು. ಯೋಜನೆ ಸದ್ಬಳಕೆ ಕುರಿತು ವಿವರಿಸಿದರು. ಉಪಾಧ್ಯಕ್ಷ ಕುಮಾರ್, ಜಿ.ಪಂ. ಸದಸ್ಯ ವಿಜಯಕುಮಾರ್, ತಾ.ಪಂ. ಸದಸ್ಯೆ ಅರುಂಧತಿ ಚಿಕ್ಕಣ್ಣ, ಟಿಎಪಿಸಿಎಂಎಸ್ ನಿರ್ದೇಶಕ ನಾರಾಯಣಪ್ಪ, ಕಲ್ಯಾ ಗ್ರಾಮ ಪಂಚಾಯ್ತಿ ಸದಸ್ಯರಾದ ರಂಗಸ್ವಾಮಯ್ಯ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

