ಬೆಂಗಳೂರು ಗ್ರಾಮಾಂತರ

'ಚುಂಚನಶ್ರೀ ಶೈಕ್ಷಣಿಕ, ಸಾಮಾಜಿಕ ಹರಿಕಾರ'

Published On :

ನೆಲಮಂಗಲ: ಸಮಾಜದ ಅಂಕು ಡೊಂಕುಗಳನ್ನು ತಿದ್ದಿ ಉನ್ನತ ಮಟ್ಟದ ಶೈಕ್ಷಣಿಕ, ಸಾಮಾಜಿಕ ಹಾಗೂ ಧಾರ್ಮಿಕ ಕಾರ್ಯವನ್ನು 40 ದಶಕಗಳ ಕಾಲ ಹಗಲಿರುಳು ಶ್ರಮಿಸಿದ ಕೀರ್ತಿ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರಿಗೆ ಸಲ್ಲುತ್ತದೆ ಎಂದು ವಿಧಾನಪರಿಷತ್ ಸದಸ್ಯ ಇ.ಕೃಷ್ಣಪ್ಪ ಅಭಿಪ್ರಾಯಪಟ್ಟಿದ್ದಾರೆ.
ಬುಧವಾರ ಪಟ್ಟಣದ ಚಿಕ್ಕೆಲ್ಲಯ್ಯ ಸಮುದಾಯ ಭವನದಲ್ಲಿ ಡಾ.ಬಾಲಗಂಗಾಧರನಾಥ ಸ್ವಾಮೀಜಿ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ಶ್ರೀಗಳು ರಾಜ್ಯದೆಲ್ಲೆಡೆ ಪ್ರವಾಸ ಮಾಡಿ, ಒಕ್ಕಲಿಗ ಸಮಾಜವನ್ನು ಒಗ್ಗೂಡಿಸಿದ್ದಾರೆ.
ಆದಿಚುಂಚನಗಿರಿಯ 560 ಶಾಖಾ ಮಠ ತೆರೆಯುವ ಮೂಲಕ ಧಾರ್ಮಿಕ ಸೇವೆ ನಿರಂತರವಾಗಿ ನಡೆಸಿ ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಡಸಲು ಮಾರ್ಗದರ್ಶನ ನೀಡಿದ್ದಾರೆ ಎಂದು ಸ್ಮರಿಸಿದರು.
ಸಮಾಜದ ಎಲ್ಲಾ ವರ್ಗದ ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣ ದೊರೆಯಬೇಕು. ರಾಜ್ಯದಲ್ಲಿ ಎಷ್ಟು ಜನಸಂಖ್ಯೆ ಇದೆ ಅಷ್ಟೇ ಮರಗಿಡಗಳಿರಬೇಕು. ಪ್ರತಿಯೊಬ್ಬರಿಗೂ ಉತ್ತಮ ಆರೋಗ್ಯ ಸೇವೆ ಸಿಗಬೇಕೆಂಬ ಶ್ರೀಗಳ ಕನಸು ಈಡೇರಿಸುವ ಮನೋಭಾವ ಹೊಂದಬೇಕು ಎಂದು ಶಾಸಕ ನಾಗರಾಜು ತಿಳಿಸಿದರು.
ಜಿ.ಪಂ.ಸದಸ್ಯರಾದ ಚಂದ್ರಣ್ಣ, ಎಂ.ಎನ್.ರಾಂ, ಜೆಡಿಎಸ್ ಮುಖಂಡರಾದ ಕರಿವರದಯ್ಯ, ಪಿಎಂಸಿ ನಿರ್ದೇಶಕ ಸುಬ್ಬರಾಯಪ್ಪ, ಬೈರೇಗೌಡ,ನೆ.ಯೋ.ಪ್ರಾ.ಅಧ್ಯಕ್ಷ ಎಸ್.ಮಲ್ಲಯ್ಯ, ಹೊಯ್ಸಳಸೇನೆ ರಾಜ್ಯಾಧ್ಯಕ್ಷ ಬಿ.ಎಸ್.ಕೃಷ್ಣಮೂರ್ತಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.