ಬೆಂಗಳೂರು ಸಮಾವೇಶಕ್ಕೆ ತೆರಳಿದ ಕಾರ್ಯಕರ್ತರು
ಚನ್ನಪಟ್ಟಣ: ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ದ್ವಿತೀಯ ಸಮಾವೇಶಕ್ಕೆ ತಾಲೂಕಿನಿಂದ ನೂರಾರು ಕಾರ್ಯಕರ್ತರು ತೆರಳಿದರು.
ಪಟ್ಟಣದ ಸ್ಪನ್ ಸಿಲ್ಕ್‌ನಿಂದ ಷೇರು ಹೋಟೆಲ್‌ವರೆಗೂ ಜಾನಪದ ಕಲಾತಂಡಗಳ ಮೆರವಣಿಗೆ ಮೂಲಕ ತೆರಳಿದ ಕಾರ್ಯಕರ್ತರು ಸಮಾವೇಶಕ್ಕೆ ತೆರಳಿದರು.
ಕಸಾಪ ಅಧ್ಯಕ್ಷ ಶಿವಮಾದು ಹಾಗೂ ಮಾಕಳಿ ಮಹೇಶ್ ಮೆರವಣಿಗೆಗೆ ಚಾಲನೆ ನೀಡಿ, ನಾಡು ನುಡಿ, ನೆಲ ಜಲ ರೈತಪರ ಚಿಂತನೆಗಳ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಸಮಾವೇಶ ಯಶಸ್ವಿಯಾಗಲಿ ಎಂದು ಶುಭ ಕೋರಿದರು.
ಜನಪರ ವೇದಿಕೆ ಅಧ್ಯಕ್ಷ ರಮೇಶ್‌ಗೌಡ ಮಾತನಾಡಿ, ಎರಡು ವರ್ಷಗಳ ಹಿಂದೆ ಅನೇಕ ಏಳು ಬೀಳುಗಳೊಂದಿಗೆ ಪ್ರಾರಂಭಗೊಂಡ ಸಂಘಟನೆ ನಾಡಿನಲ್ಲಿ ನಡೆಯುತ್ತಿರುವ ಎಲ್ಲಾ ಅನ್ಯಾಯಗಳ ವಿರುದ್ಧ ದನಿ ಎತ್ತಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತಿದೆ. ನಾಡಪರ-ರೈತಪರ ನಿರಂತರ ಹೋರಾಟ ನಡೆಸುತ್ತಿರುವ ನಾವು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ನಿಷ್ಠೆ, ಪ್ರಾಮಾಣಿಕವಾಗಿ ಜನತೆಗಾಗಿ ಶ್ರಮಿಸುತ್ತಿದ್ದೇವೆ ಎಂದು ತಿಳಿಸಿದರು.
ಎರಡು ವರ್ಷದ ಅವಧಿಯಲ್ಲಿ ಸುಮಾರು ನೂರಾರು ಹೋರಾಟಗಳನ್ನು ನಡೆಸಿ ಅನೇಕ ವೇಳೆ ಸೆರೆಮನೆ ವಾಸ ಅನುಭವಿಸಿದ್ದು, ಮುಂದಿನ ದಿನಗಳಲ್ಲಿ ಸಂಘಟನೆ ಕೈಗೊಳ್ಳಬೇಕಿರುವ ಹೋರಾಟಗಳು, ನಾನು ನುಡಿ ಮತ್ತು ಸಮಕಾಲೀನ ತಲ್ಲಣಗಳ ಬಗ್ಗೆ ಚರ್ಚಿಸುವ ಜತೆಗೆ ಸಂಘಟನೆ ಮುಂದಿನ ನಡೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಮೂಲಕ ಸಮಾವೇಶ ಸಂಘಟನೆ ಮತ್ತೊಂದು ಮೈಲಿಗಲ್ಲಾಗಲಿದೆ ಎಂದರು.
ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಹಮ್ಮಿಕೊಂಡಿರುವ ದ್ವಿತೀಯ ಸಮಾವೇಶದಲ್ಲಿ ವೇದಿಕೆಯ ಕಚೇರಿ ಉದ್ಘಾಟನೆ, ನಾಡು-ನುಡಿ-ರೈತಪರ ಗೋಷ್ಠಿ. ವೇದಿಕೆಗಾಗಿ ದುಡಿದ ಕಾರ್ಯಕರ್ತರಿಗೆ ಅಭಿನಂದನೆ. ಹಾಗೂ ವೇದಿಕೆಯ ಪ್ರತ್ಯಕ್ಷ, ಪರೋಕ್ಷ ಸಹಕಾರ ನೀಡಿದವರಿಗೆ ಸನ್ಮಾನ ಹಾಗೂ ಹಾಸ್ಯೋತ್ಸವ ಕಾರ್ಯಕ್ರಮ ಹಮ್ಮಿ ಕೊಂಡಿರುವುದಾಗಿ ವಿವರಿಸಿದರು.
ಮೆರವಣಿಗೆಯಲ್ಲಿ ವೇದಿಕೆಯ ಮಹಿಳಾ ಘಟಕದ ಅಧ್ಯಕ್ಷೆ ಮಂಗಳಮ್ಮ, ಖಜಾಂಚಿ ಕೆ.ಟಿ.ಲಕ್ಷ್ಮಮ್ಮ, ಪ್ರಧಾನ ಕಾರ್ಯದರ್ಶಿ ಇ.ತಿ.ಶ್ರೀನಿವಾಸ್, ಕಾರ್ಯಾಧ್ಯಕ್ಷ ಶಂಕರ್ ವಳಗೆರೆ ದೊಡ್ಡಿ, ತಾಲೂಕು ಅಧ್ಯಕ್ಷ ಬೇವೂರು ಯೋಗೇಶ್, ರಂಜಿತ್‌ಗೌಡ, ಕೃಷ್ಣೇಗೌಡ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

