ಸಬ್ಸಿಡಿ ಹಣ ಬ್ಯಾಂಕ್‌ಖಾತೆಗೆ ಬೇಡ
ರಾಮನಗರ: ಸಬ್ಸಿಡಿ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ನೇರ ವರ್ಗಾವಣೆ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರದ ಯೋಜನೆಯನ್ನು ಖಂಡಿಸಿ ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ನಗರದಲ್ಲಿ ಬುಧವಾರ ಬೈಕ್ ರ್ಯಾಲಿ ಮೂಲಕ ಪ್ರತಿಭಟಿಸಿದರು.
ನಗರದ ಐಜೂರು ವೃತ್ತದಿಂದ ಆರಂಭವಾದ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ ಮಾರಸಂದ್ರ ಮುನಿಯಪ್ಪ, ಸಬ್ಸಿಡಿ ಹಣವನ್ನು ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮಾಡಲು ಹೊರಟಿರುವುದು ಬಡ ಮತ್ತು ಮಧ್ಯಮ ವರ್ಗವನ್ನು ನಾಮಾವಶೇಷಗೊಳಿಸುವ ಷಡ್ಯಂತ್ರ ಎಂದು ಕಿಡಿಕಾರಿದರು.
ಇದುವರೆಗೆ ಪಡಿತರ ವ್ಯವಸ್ಥೆ ಮೂಲಕ ಬಡ ಜನರಿಗೆ ಸಬ್ಸಿಡಿ ದರದಲ್ಲಿ ಅಕ್ಕಿ, ಗೋಧಿ, ಸಕ್ಕರೆ, ಸೀಮೆ ಎಣ್ಣೆಗಳನ್ನು ನೀಡಲಾಗುತ್ತಿತ್ತು. ಇದರಿಂದ ಹಸಿದ ಹೊಟ್ಟೆಗಳಿಗೆ ಒಂದು ಹೊತ್ತಿನ ಊಟವಾದರೂ ದೊರೆಯುತ್ತಿತ್ತು. ಈಗ ಹಣ ನೀಡಿ, ಹಸಿವು ಹೆಚ್ಚಿಸುವ ಹುನ್ನಾರ ನಡೆದಿದೆ ಎಂದು ಟೀಕಿಸಿದರು.
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವು ಸಬ್ಸಿಡಿ ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡುವ ಯೋಜನೆ ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು. ತಕ್ಷಣ ಯೋಜನೆ ಸ್ಥಗಿತಗೊಳಿಸಿ, ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಆಗ್ರಹಿಸಿದರು.
ಒಂದು ವೇಳೆ ಫಲಾನುಭವಿಗಳ ಖಾತೆಗಳಿಗೆ ನೇರ ವರ್ಗಾವಣೆ ಮಾಡಿದಲ್ಲಿ ಆ ಹಣವನ್ನು ಕುಡಿತ, ಜೂಜು ಸೇರಿದಂತೆ ಇನ್ನಿತರೆ ದುಶ್ಚಟಗಳಿಗೆ ಬಳಸಿಕೊಂಡು ಪೋಲು ಮಾಡುವ ಸಾಧ್ಯತೆಯೇ ಹೆಚ್ಚು ಎನ್ನುವ ಅಂಶವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಮುನಿಯಪ್ಪ ಹೇಳಿದರು.
ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ್, ವಿಜಯ್‌ಗೌಡ, ರವಿಚಂದ್ರ, ಶರತ್ ಎನ್.ಮೋಹಿತೆ, ರಾಜೀವ್, ಗುರುಪ್ರಸಾದ್ ಮತ್ತಿತರರಿದ್ದರು.
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಾಗಿದ ಪ್ರತಿಭಟನಾಕಾರರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಕರಪತ್ರಗಳನ್ನು ಹಂಚಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

