ದೊಡ್ಡಬಳ್ಳಾಪುರ: ಇಲ್ಲಿನ ತಾಲೂಕು ಆಡಳಿತದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ನೇತೃತ್ವದಲ್ಲಿ ಭಾರತ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಜ.26ರ ಶನಿವಾರ ಬೆಳಗ್ಗೆ 9 ಗಂಟೆಗೆ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ನಡೆಯಲಿದೆ. ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಡಾ.ಮಹೇಶ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕ ಜೆ.ನರಸಿಂಹಸ್ವಾಮಿ ಅಧ್ಯಕ್ಷತೆ ವಹಿಸುವರು. ಕೇಂದ್ರ ಸಚಿವ ವೀರಪ್ಪಮೊಯ್ಲಿ, ರೇಷ್ಮೆ ಮಂಡಲಿ ಅಧ್ಯಕ್ಷ ಕೆ.ಎಂ.ಹನುಮಂತರಾಯಪ್ಪ, ವಿಧಾನಪರಿಷತ್ ಸದಸ್ಯ ರಾಮಚಂದ್ರಗೌಡ, ಪುಟ್ಟಣ್ಣ, ಇ.ಕೃಷ್ಣಪ್ಪ, ಜಿ.ಪಂ ಉಪಾಧ್ಯಕ್ಷ
ಅಂಬಿಗರ ಚೌಡಯ್ಯ ಜಯಂತಿ
ಮಾಗಡಿ: ಸಾಮಾಜಿಕ ಅಸಮಾನತೆ ತೊಲಗಿಸಲು ಅಂಬಿಗರ ಚೌಡಯ್ಯ ಅವರ ವಚನಗಳು ಸಹಕಾರಿಯಾಗಿತ್ತುಎಂದು ಪುರಸಭೆ ಮಾಜಿ ಅಧ್ಯಕ್ಷ ಪಿ.ವಿ.ಸೀತಾರಾಂ ನುಡಿದರು. ಅವರು ಪಟ್ಟಣದ ಶ್ರೀರಾಮೇಶ್ವರ ಬಡಾವಣೆಯಲ್ಲಿ ಬೆಸ್ತರ ಹಾಗು ದಲಿತ ಹಿತರಕ್ಷಣಾ ಒಕ್ಕೂಟದ ವತಿಯಿಂದ ನಡೆದ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಕಾರ್ಯಕ್ರಮದಲ್ಲಿ ಅಂಬಿಗರ ಚೌಡಯ್ಯ ಅವರ ಭಾವ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು. ತಾ.ಪಂ. ಮಾಜಿ ಸದಸ್ಯ ಸಿ.ಜಯರಾಮು ಮಾತನಾಡಿ ಅಂಬಿಗರ ಚೌಡಯ್ಯ ಅವರ ವಚನಗಳು ಚಾಟಿ ಏಟಿನಂತೆ ಇದ್ದವು ಎಂದರು ಆಧುನಿಕ ಯುಗದಲ್ಲೂ ವಚನಗಳಲ್ಲಿನ ಆಶಯಗಳು ಈಡೇರಿಲ್ಲ, ಭ್ರಷ್ಟಾಚಾರ, ಅಸಮಾನತೆ ತಾಂಡವಾಡುತ್ತಿದೆ ಎಂದು ಪುರಸಭೆ ಮಾಜಿ ಅಧ್ಯಕ್ಷ ರಂಗಹನುಮಯ್ಯ ವಿಷಾದ ವ್ಯಕ್ತಪಡಿಸಿದರು.
ಪ್ರಗತಿಪರ ರೈತ ಪುಟ್ಟಸ್ವಾಮಿ, ನೇತೇನಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ಶಾಂತರಾಜ್, ಹೊಸಪೇಟೆಯ ಗಿರಿಜಾ ಶಿವಾನಂದ್, ತಿರುಮಲೆ ಕನ್ನಡ ಕೂಟದ ಸಂಚಾಲಕ ಟಿ.ಎಂ.ಶ್ರೀನಿವಾಸ್, ಪುರಸಭೆ ಸದಸ್ಯೆ ನಿರ್ಮಲಾ ಸೀತಾರಾಂ ಇತರರು ಚೌಡಯ್ಯ ಕುರಿತು ಮಾತನಾಡಿದರು.