ಬೆಂಗಳೂರು ಗ್ರಾಮಾಂತರ

ನೆಲಮಂಗಲ ತಾಲೂಕನ್ನು ಮಾದರಿಆಗಿಸಲು ಶ್ರಮಿಸುವೆ: ನಾಗರಾಜು

Published On :

ನೆಲಮಂಗಲ: ತಾಲೂಕಿನ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಯೋಜನೆಗಳನ್ನು  ಹಮ್ಮಿಕೊಳ್ಳಲಾಗಿದ್ದು ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಶ್ರಮಿಸಲಾಗುತ್ತಿದೆ. ಈ ನಿಟ್ಟಿನಲ್ಲಿ  ಜನತೆ ಯಾವುದೇ ಜಾತಿ, ಮತ, ಪಕ್ಷಭೇದ ಸಂಘಟನೆಗಳನ್ನು ಗಣನೆಗೆ ತೆಗೆದುಕೊಳ್ಳದೆ ಸಲಹೆ ಸೂಚನೆಗಳನ್ನು ನೀಡಿದರೆ ತಾಲೂಕನ್ನು ರಾಜ್ಯದಲ್ಲಿಯೇ ಅಭಿವೃದ್ಧಿಯಲ್ಲಿ ಮಾದರಿಯಾಗಿಸಲು ಶ್ರಮಿಸುವುದಾಗಿ ಶಾಸಕ ಎಂ.ವಿ.ನಾಗರಾಜು ತಿಳಿಸಿದರು.
ಅವರು ಶುಕ್ರವಾರ ಪಟ್ಟಣದ ದೇವಾಂಗ ಬೀದಿಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿಯಲ್ಲಿ 5.5 ಲಕ್ಷ ವೆಚ್ಚದ ರಸ್ತೆ ಡಾಂಬರೀಕರಣ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಪುರಸಭೆ ಅಧ್ಯಕ್ಷ  ಕೃಷ್ಣಮೂರ್ತಿ ಮಾತನಾಡಿ, ಸಾರ್ವಜನಿಕರು ತಮ್ಮ ರಸ್ತೆಗಳಲ್ಲಿ ನಡೆಯುವಂತಹ ಅಭಿವೃದ್ಧಿ  ಕಾಮಗಾರಿಗಳನ್ನು ಗಮನಿಸಿ ಸಂಬಂಧ ಪಟ್ಟ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಕಾಮಗಾರಿ ಕುರಿತು ಸೂಕ್ತ ಸಲಹೆ ಸೂಚನೆಯನ್ನು ಹಾಗೂ ಕಾಮಗಾರಿಯ ಗುಣಮಟ್ಟ ತಿಳಿಸುವಂತಾಗಬೇಕು ಎಂದರು.   ಉಪಾಧ್ಯಕ್ಷ ಶಿವಕುಮಾರ್, ನೆ.ಯೋ.ಪ್ರಾ ಅಧ್ಯಕ್ಷ ಎಸ್.ಮಲ್ಲಯ್ಯ, ಮುಖಂಡರುಗಳಾದ ನಾಗರಾಜು, ಬಾಲಾಜಿ, ರಾಜಮ್ಮ, ಸೌಮ್ಯ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.