ಬೆಂಗಳೂರು ಗ್ರಾಮಾಂತರ

ಯುವ ಜನತೆಗೆ ನೀಡಿರುವ ಮತದಾನ ಹಕ್ಕು ಸದುಪಯೋಗ ಪಡಿಸಿಕೊಳ್ಳಲಿ

Published On :

ನೆಲಮಂಗಲ: ಯುವ ಜನತೆಗೆ ನೀಡಿರುವ ಮತದಾನ ಹಕ್ಕು ಸದುಪಯೋಗ ಪಡಿಸಿಕೊಂಡು ಚುನಾವಣೆಯಲ್ಲಿ ಮತದಾನ ಮಾಡಬೇಕು ಎಂದು  ಪುರಸಭೆ ಅಧ್ಯಕ್ಷ ಎನ್.ಆರ್. ಕೃಷ್ಣಮೂರ್ತಿ ಹೇಳಿದರು.
ಅವರು ಶುಕ್ರವಾರ ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ  ತಾಲೂಕು ಚುನಾವಣ ಇಲಾಖೆ ಆಯೋಜಿಸಿದ್ದ  ರಾಷ್ಟ್ರೀಯ ಮತದಾರರ  ದಿನದ ಕಾರ್ಯಕ್ರಮದಲ್ಲಿ  ಮಾತನಾಡಿ, ಪ್ರಜಾಪ್ರಭುತ್ವವನ್ನು ಬಲಪಡಿಸಲು ಯುವ ಜನತೆ ಚುನಾವಣಾ ಪ್ರಕ್ರಿಯೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದರು.
ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ನಮ್ಮ ದೇಶದ ಪ್ರಜಾಪ್ರಭುತ್ವ   ಘನತೆಯನ್ನು ಎತ್ತಿಹಿಡಿಯಬೇಕು ಎಂದು  ಕ್ಷೇತ್ರ ಶಿಕ್ಷಣಾಧಿಕಾರಿ  ಹನುಮನಾಯಕ್ ತಿಳಿಸಿದರು. ನಗರ ಪ್ರದೇಶಗಳಲ್ಲಿ  ಕಡಿಮೆ ಮತದಾನವಾಗುತ್ತಿದೆ  ಎಂಬುದು ಬೇಸರದ ಸಂಗತಿಯಾಗಿದೆ ಎಂದು ಉಪಾಧ್ಯಕ್ಷ ಶಿವಕುಮಾರ್ ತಿಳಿಸಿದರು. ಮತದಾರರ ಪ್ರತಿಜ್ಞಾ ವಿಧಿಯನ್ನು ಚುನಾವಣಾ ಶಿರಸ್ತೇದಾರ್ ಸಿದ್ದಪ್ಪ ಬೋಧಿಸಿದರು. ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿಯನ್ನು ವಿತರಿಸಲಾಯಿತು.  ಶಿಕ್ಷಕ ನೂರ್‌ಉಲ್ಲಾ ಷರಿಪ್, ಅಡೇಪೇಟೆ ಅಂಗನವಾಡಿ ಶಿಕ್ಷಕಿ ಅಶ್ವತ್ಥಮ್ಮ ಅವರಿಗೆ ಉತ್ತಮ ಮತಗಟ್ಟೆ ಅಧಿಕಾರಿಗಳೆಂದು ಪ್ರಶಂಸನಾ ಪತ್ರವನ್ನು ವಿತರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.