ಯುವಕರು ಉದಾಸೀನ ಮಾಡದೆ ಕಡ್ಡಾಯ ಮತ ಹಾಕಿ
ಮಾಗಡಿ: ಸುಭದ್ರ ಪ್ರಜಾಪ್ರಭುತ್ವಕ್ಕಾಗಿ ಯುವಶಕ್ತಿಗಳು ಚುನಾವಣೆಯಲ್ಲಿ ಕಡ್ಡಾಯ ಮತದಾನ ಮಾಡಲು ಜಾಗೃತರಾಗಬೇಕು ಎಂದು ತಹಸೀಲ್ದಾರ್ ಚಂದ್ರಶೇಖರಯ್ಯ ನುಡಿದರು.
ಅವರು ರಾಷ್ಟ್ರೀಯ ಚುನಾವಣಾ ಆಯೋಗ ಆದೇಶದಂತೆ ಆಯೋಜಿಸಿದ್ದ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಮತದಾನ ಪವಿತ್ರವಾದುದು. 18 ವರ್ಷ ತುಂಬಿದ ಎಲ್ಲರೂ ಮತದಾರರ ಗುರುತಿನ ಚೀಟಿ ಪಡೆದು, ಕಡ್ಡಾಯ ಮತದಾನ ಮಾಡಬೇಕು. ನಿಮ್ಮ ಪವಿತ್ರ ಮತದಾನದಿಂದ ಸುಭದ್ರ ರಾಷ್ಟ್ರ ನಿರ್ಮಾಣ ಸಾಧ್ಯವಿದೆ ಎಂದು ಪ್ರಜಾಪ್ರಭುತ್ವದಲ್ಲಿ ಮತದಾರರ ಮಹತ್ವಗಳು, ಅನುಕೂಲಗಳನ್ನು ತಿಳಿಸಿಕೊಟ್ಟರು. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಾಜಶೇಖರ್ ಮಾತನಾಡಿ ಭ್ರಷ್ಟಚಾರ ಮುಕ್ತ ರಾಷ್ಟ್ರ ನಿರ್ಮಾಣವಾಗಬೇಕಾದರೆ ಎಲ್ಲರೂ ಕಡ್ಡಾಯ ಮತದಾನ ಮಾಡಬೇಕು. ಇತ್ತೀಚೆಗೆ ಮತದಾನ ಮಾಡುವವರ ಸಂಖ್ಯೆ ಗಣನೀಯವಾಗಿ ಕುಸಿಯುತ್ತಿರುವುದರಿಂದ ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಧಕ್ಕೆಯಾಗುತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು ಮತದಾನದ ಹಕ್ಕುಗಳು ಮೌಲ್ಯಗಳ ಬಗ್ಗೆ ಅರಿಯಬೇಕು ಎಂದರು.
ಬಿಇಓ ಆರ್. ರಂಗಸ್ವಾಮಿ ಮಾತನಾಡಿದರು. ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಸಿ. ರಾಜಶೇಖರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಪುರಸಭೆ ಮುನಿಯಪ್ಪ ಇತರರು ಇದ್ದರು. ಇದೇ ವೇಳೆ 18 ವರ್ಷ ತುಂಬಿದ ಮತದಾರರಿಗೆ ಮತಚಲಾಯಿಸುವ ಹಕ್ಕಿನ ಗುರುತಿನ ಚೀಟಿಯನ್ನು ತಹಸೀಲ್ದಾರ್ ಚಂದ್ರಶೇಖರಯ್ಯ ವಿತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

