ರಾಜ್ಯ ಮಟ್ಟದ ಕವಿಕಾವ್ಯ ಸಮ್ಮೇಳನ
ನೆಲಮಂಗಲ: ತಾಲೂಕಿನ ದಾಬಸ್ಪೇಟೆ ಹೋಬಳಿಯ ಶ್ರೀ ವನಕಲ್ಲು ಮಲ್ಲೇಶ್ವರ ಮಹಾಸುಕ್ಷೇತ್ರದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಠದ ಸಹಯೋಗದಲ್ಲಿ ರಾಜ್ಯ ಮಟ್ಟದ ಕವಿಕಾವ್ಯ ಸಮ್ಮೇಳನವನ್ನು ಮುಂದಿನ ಮಾರ್ಚ್ ತಿಂಗಳಿನಲ್ಲಿ ಆಯೋಜಿಸಲಾಗಿದೆ. ಆಸಕ್ತ ಕವಿಗಳು ತಮ್ಮ ಇತ್ತೀಚಿನ ಎರಡು ಕವನಗಳನ್ನು ಡಿ.ಟಿ.ಪಿ ಮಾಡಿಸಿ ಫೆ.5ರ ಒಳಗಾಗಿ ಮಠದ ವಿಳಾಸಕ್ಕೆ ಕಳುಹಿಸಿಕೊಡುವಂತೆ ಶ್ರೀ ಬಸವ ರಮಾನಂದ ಸ್ವಾಮೀಜಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ 9663882688, 9663884144 ಸಂಖ್ಯೆಗಳಿಗೆ ಸಂಪರ್ಕಿಸಿ.
ಲೋಕಾಯಕ್ತರಿಗೆ ದೂರು
ಶಿರಾ: ಪಟ್ಟಣದ ಚಿಕ್ಕಕೆರೆಯ ಕೋಡಿಹಳ್ಳದಿಂದ ಕಲ್ಲುಕೋಟೆವರೆಗೆ ಸಂಪರ್ಕ ಕಲ್ಪಿಸುತ್ತಿದ್ದ ಕಾಲುವೇ ಒತ್ತುವರಿ ಮಾಡಿ ವಾಣಿಜ್ಯ ಉದ್ದೇಶಕ್ಕಾಗಿ ಭೂ ಪರಿವರ್ತನೆ ಮಾಡಿಸುವ ಸಂಚು ನಡೆದಿದೆ ಎಂದು ಲೋಕಾಯಕ್ತರಿಗೆ ದೂರು ಸಲ್ಲಿಸಿದ್ದಾರೆ. ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ನಡೆದ ಲೋಕಾಯುಕ್ತರ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಲೋಕಾಯುಕ್ತ ನಿರೀಕ್ಷಕ ರಮೇಶ್ ಕುಮಾರ್ಗೆ ಚಿಕ್ಕ ಕೆರೆ ಹಿಂಬಾಗದ ಅಚ್ಚಕಟ್ಟು ಪ್ರದೇಶದ ರೈತರು ಈ ದೂರು ಸಲ್ಲಿಸಿದ್ದಾರೆ. ಈ ಕುರಿತು ಸಣ್ಣ ನೀರಾವರಿ ಸಹಾಯಕ ಎಂಜಿನಿಯರ್ಗೆ ಮೌಖಿಕವಾಗಿ ದೂರು ನೀಡಿದ್ದರೂ, ಅವರು ಸರಿಯಾಗಿ ಸ್ಥಳ ಪರೀಕ್ಷೆ ಮಾಡದೆ ಕರ್ತವ್ಯಲೋಪ ಎಸಗಿದ್ದಾರೆ. ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಅಲ್ಲಿನ ವಾಸಿಗಳಾದ ಮಂಜನಾಥ್, ಅನ್ವರ್ಸಾಬ್, ರಂಗನಾಥಪ್ಪ, ತಿಪ್ಪಣ್ಣ, ರಂಗರಾಜು, ವೆಂಕಟಪ್ಪ, ರಾಮಪ್ಪ, ಕರಿಯಣ್ಣ, ಗೋವಿಂದಪ್ಪ, ಶ್ರೀನಿವಾಸ್, ಹನುಮಂತಪ್ಪ ಮೊದಲಾದವರು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.
ಇಂದು ಮಧ್ಯಸ್ಥಿಕೆ ತರಬೇತಿ ಶಿಬಿರ
ತುಮಕೂರು: ಇಲ್ಲಿನ ಜಿಲ್ಲಾ ಶೈಕ್ಷಣಿಕ ತರಬೇತಿ ಕೇಂದ್ರದಲ್ಲಿ ವಕೀಲರಿಗೆ ಜ. 26 ರಂದು ಬೆಳಗ್ಗೆ 10 ಗಂಟೆಗೆ ಮಧ್ಯಸ್ಥಿಕೆ ತರಬೇತಿ ಶಿಬಿರ ಆಯೋಜಿಸಲಾಗಿದೆ. ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ, ಜಿಲ್ಲಾ ಮಧ್ಯಸ್ಥಿಕೆ ಕೇಂದ್ರ, ತುಮಕೂರು, ಬಾರ್ ಅಸೋಸಿಯೇಷನ್ ಆಶ್ರಯದಲ್ಲಿ ಈ ಶಿಬಿರ ನಡೆಯಲಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹಾಗೂ ತುಮಕೂರು ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಡಿ.ವಿ. ಶೈಲೇಂದ್ರ ಕುಮಾರ್ ಅವರು ತರಬೇತಿ ಶಿಬಿರವನ್ನು ಉದ್ಘಾಟಿಸುವರು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಚ್.ಬಿ. ಪ್ರಭಾಕರಶಾಸ್ತ್ರಿ ಅವರು ಅಧ್ಯಕ್ಷತೆ ವಹಿಸವರು.
ಇಂದು ಧ್ವಜಾರೋಹಣ
ತುಮಕೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಹಿರಿಯ ನ್ಯಾಯಾಧೀಶರಾದ ನ್ಯಾ. ಡಿ.ವಿ.ಶೈಲೇಂದ್ರ ಕುಮಾರ್ ಅವರು ತುಮಕೂರಿನ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಜ.26 ರಂದು ಬೆಳಿಗ್ಗೆ 8 ಗಂಟೆಗೆ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೇರವೇರಿಸುವರು.
ಸಚಿವರಿಂದಧ್ವಜಾರೋಹಣ
ತುಮಕೂರು: ಜಿಲ್ಲಾ ಆಡಳಿತ, ತುಮಕೂರು ವತಿಯಿಂದ ಜ. 26 ರಂದು ಬೆಳಗ್ಗೆ 9 ಗಂಟೆಗೆ ತುಮಕೂರಿನ ಮಹಾತ್ಮಾ ಗಾಂಧಿ ಕ್ರೀಡಾಂಗಣದಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಜರುಗಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಸೊಗಡು ಶಿವಣ್ಣ ರಾಷ್ಟ್ರ ಧ್ವಜಾರೋಹಣ ಮಾಡಿ ಗೌರವ ರಕ್ಷೆ ಸ್ವೀಕರಿಸುವರು.
ವಿದ್ಯಾರ್ಥಿನಿಯರ ಸಭೆ ಇಂದು
ತುಮಕೂರು: ತುಮಕೂರಿನ ಸಿದ್ದಗಂಗಾ ಮಹಿಳಾ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಪದವಿ ಕಾಲೇಜಿನ ಹಿರಿಯ ವಿದ್ಯಾರ್ಥಿನಿಯರ ಸಂಘದ 9 ನೇ ವಾರ್ಷಿಕ ಸರ್ವ ಸದಸ್ಯರ ಸಭೆ ಜ.26 ರಂದು ಬೆಳಗ್ಗೆ 10-30 ಕ್ಕೆ ಕಾಲೇಜಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ಏರ್ಪಾಟಾಗಿದೆ. ಮುಖ್ಯ ಅತಿಥಿಗಳಾಗಿ ತುಮಕೂರಿನ ಕವಯತ್ರಿ ತುಮಕೂರು ಭಾರ್ಗವಿ ಪಾಲ್ಗೊಳ್ಳಲ್ಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

