ದೊಡ್ಡಬಳ್ಳಾಪುರದ ವಿವಿಧೆಡೆ ಸಂಭ್ರಮದ ಗಣರಾಜ್ಯೋತ್ಸವ
ದೊಡ್ಡಬಳ್ಳಾಪುರ: ಇಲ್ಲಿನ ವಿವಿಧ ವಿದ್ಯಾ ಸಂಸ್ಥೆಗಳು, ಸರ್ಕಾರಿ ಕಚೇರಿಗಳಲ್ಲಿ ಭಾರತ ಗಣರಾಜ್ಯೋತ್ಸವವನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗಿದೆ. ಎಲ್ಲೆಡೆ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ನಡೆಸಲಾಗಿದೆ.
ಇಲ್ಲಿನ ಆರ್.ಎಲ್.ಜಾಲಪ್ಪ ಸಮೂಹ ವಿದ್ಯಾ ಸಂಸ್ಥೆಗಳ ಆಡಿಯಲ್ಲಿ ಆರ್.ಎಲ್.ಜಾಲಪ್ಪ ತಾಂತ್ರಿಕ ಮಹಾ ವಿದ್ಯಾಲಯ, ಶ್ರೀದೇವರಾಜ ಅರಸು ವ್ಯವಹಾರ ನಿರ್ವಹಣಾ ಮಹಾವಿದ್ಯಾಲಯ, ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ, ಅಂತರ ರಾಷ್ಟ್ರೀಯ ವಸತಿ ಶಾಲೆ, ಆರ್ಎಲ್ಜೆ ಕೈಗಾರಿಕಾ ತರಬೇತಿ ಕೇಂದ್ರಗಳ ಸಹಯೋಗದಲ್ಲಿ ಕಲಾಮಂದಿರ ಆವರಣದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
ಸಂಸ್ಥೆಯ ಟ್ರಸ್ಟಿ ಜೆ.ರಾಜೇಂದ್ರ ಧ್ವಜಾರೋಹಣ ನೆರವೇರಿಸಿದರು. ಅವರು ಮಾತನಾಡಿ, ದೇಶದ ಸಮಗ್ರತೆ ಮತ್ತು ಐಕ್ಯತೆಯನ್ನು ಕಾಪಾಡಿಕೊಳ್ಳುವಲ್ಲಿ ವಿದ್ಯಾರ್ಥಿ ಯುವಜನರು ನಿರ್ವಹಿಸಬೇಕಾದ ಪಾತ್ರ ಹಿರಿದು. ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಎಂದಿಗೂ ದುರುಪಯೋಗ ಮಾಡಿಕೊಳ್ಳಬಾರದು. ಸಂವಿಧಾನಬದ್ಧ ಆಶಯಗಳ ಅನುಷ್ಠಾನಕ್ಕೆ ಆದ್ಯತೆ ನೀಡಬೇಕಿದೆ ಎಂದರು.
ವಿವಿಧ ಘಟಕಗಳ ಪ್ರಾಂಶುಪಾಲರಾದ ಡಾ.ಸುಂದರಂ, ಪ್ರೊ.ಶ್ರೀನಿವಾಸನ್, ಕೆ.ಲವಕುಮಾರ್, ದೇವಿಕಾರಾಣಿ, ವಿಜಯಕುಮಾರ್ ಮತ್ತಿತರರು ಹಾಜರಿದ್ದರು.
ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆ: ಇಲ್ಲಿನ ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆಯ ಆವರಣದಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕೊಂಗಾಡಿಯಪ್ಪ ವಿದ್ಯಾ ಸಂಸ್ಥೆಯ ಸ್ನಾತಕೋತ್ತರ ಅಧ್ಯಯನ ಕೇಂದ್ರ, ಪ್ರಥಮ ದರ್ಜೆ ಕಾಲೇಜು, ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ, ಪ್ರಾಥಮಿಕ ಶಾಲೆ, ಸಂಸ್ಕೃತ ಶಾಲೆಗಳ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸಂಸ್ಥೆಯ ಕಾರ್ಯದರ್ಶಿ ಅಶ್ವತ್ಥಯ್ಯ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಲಿ ಸದಸ್ಯರು, ಪದಾಧಿಕಾರಿಗಳು, ಪ್ರಾಂಶುಪಾಲರಾದ ಪ್ರೊ.ಬಿ.ಟಿ.ಮಹದೇವ್, ಮೇಜರ್ ಎಸ್.ಮಹಾಬಲೇಶ್ವರ್, ಮುಖ್ಯಶಿಕ್ಷಕಿ ಜೋತ್ಸ್ನಾ, ಎನ್ಸಿಸಿ ಅಧಿಕಾರಿ ತಜಮುಲ್ಪಾಷಾ ಮತ್ತಿತರರು ಪಾಲ್ಗೊಂಡಿದ್ದರು.
ಸರ್ಕಾರಿ ಕಾಲೇಜು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪದವಿ ಪೂರ್ವ ಕಾಲೇಜು, ಪ್ರೌಢಶಾಲೆ ವಿಭಾಗಗಳಲ್ಲಿ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಪ್ರೊ.ಎಸ್.ಪಿ.ರಾಜಣ್ಣ, ಮೋಹನ್ಕುಮಾರ್ ನೇತೃತ್ವ ವಹಿಸಿದ್ದರು.
ನಗರಸಭೆ: ಇಲ್ಲಿನ ನಗರಸಭೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಯುಕ್ತ ಚಿಕ್ಕಣ್ಣ ಧ್ವಜಾರೋಹಣ ನೆರವೇರಿಸಿದರು. ಅಧ್ಯಕ್ಷ ಜಗದೀಶರೆಡ್ಡಿ, ಸದಸ್ಯರು, ಅಧಿಕಾರಿಗಳು ಹಾಜರಿದ್ದರು. ಅದೇ ರೀತಿ ಇಲ್ಲಿನ ಹಲವು ಸಂಘಟನೆಗಳು, ವಿವಿಧ ವಿದ್ಯಾ ಸಂಸ್ಥೆಗಳು ಮತ್ತು ಸರ್ಕಾರಿ ಕಚೇರಿಗಳಲ್ಲಿ ಗಣತಂತ್ರದಿನ ಆಚರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

