ಬೆಂಗಳೂರು ಗ್ರಾಮಾಂತರ

ಸಂಕ್ರಾಂತಿ ಸುಗ್ಗಿ ಸಂಭ್ರಮ, ಬಾಲಗಂಗಾಧರರಿಗೆ ಶ್ರದ್ಧಾಂಜಲಿ

Published On :

ರಾಮನಗರ: ಬಿಡದಿ ಬ್ಲಾಕ್ ಕಾಂಗ್ರೆಸ್‌ನಿಂದ ಜ.29ರಂದು ಬೆಳಗ್ಗೆ 10ಕ್ಕೆ ಬಿಡದಿ ಬಸ್ ನಿಲ್ದಾಣದಲ್ಲಿ ಸಂಕ್ರಾಂತಿ ಸುಗ್ಗಿ ಸಂಭ್ರಮ ಹಾಗೂ ಪರಮಪೂಜ್ಯ ಡಾ.ಬಾಲಗಂಗಾಧರನಾಥ ಮಹಾ ಸ್ವಾಮಿಯವರ ಶ್ರದ್ಧಾಂಜಲಿ, ಅನ್ನದಾನ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಕೆಪಿಸಿಸಿ ಸದಸ್ಯ ಎ.ಮಂಜುನಾಥ್ ತಿಳಿಸಿದರು. ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ, ರಂಗಭೂಮಿ ಕಲಾವಿದರಿಗೆ ರಂಗಗೀತೆ, ಜಾನಪದ ಕಲಾವಿದರಿಗೆ ತಮಟೆ ವಾದನ ಸ್ಪರ್ಧೆ ನಡೆಸಲಾಗುತ್ತದೆ. ವಿಜೇತರಿಗೆ ನಗದು ಬಹುಮಾನ ವಿತರಿಸಲಾಗುವುದು ಎಂದು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ವಿವರಿಸಿದರು.  ಸ್ಪರ್ಧೆಯಲ್ಲಿ ಮೊದಲ ಮೂರು ಬಹುಮಾನ ಪಡೆದವರಿಗೆ ಕ್ರಮವಾಗಿ ತಲಾ ರು.5, ರು.3 ಹಾಗೂ ರು.2 ಸಾವಿರ ಬಹುಮಾನ ನೀಡಲಾಗುವುದು. ಜತೆಗೆ ಭಾಗವಹಿಸಿದ ಎಲ್ಲ ಸ್ಪರ್ಧಿಗಳಿಗೂ ಪ್ರಶಂಸಾ ಪತ್ರ ವಿತರಿಸಲಾಗುವುದು ಎಂದು ಅವರು ಹೇಳಿದರು.
ಕಾಂಗ್ರೆಸ್ ಅಧಿಕಾರದಲ್ಲಿರುವ ಇಟ್ಟಮಡು ಗ್ರಾ.ಪಂ. ರಾಷ್ಟ್ರ ಪ್ರಶಸ್ತಿಗೆ ಮತ್ತು ಮಂಚನಾಯ್ಕನಹಳ್ಳಿ ಗ್ರಾ.ಪಂ. ರಾಜ್ಯ ಪ್ರಶಸ್ತಿಗೆ ಪುರಸ್ಕೃತವಾಗಿದೆ. ಈ ಸಾಧನೆಗೆ ಕಾರಣರಾಗಿರುವ ಎರಡೂ ಗ್ರಾ.ಪಂ.ಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಸನ್ಮಾನಿಸಲಾಗುವುದು ಎಂದರು. ಸಮಾಜ ಸೇವೆಯಲ್ಲಿ ತೊಡಗಿ ಎಲೆಮರೆ ಕಾಯಿಯಂತಿರುವ ಗಣ್ಯರನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಗುವುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.